ನವದೆಹಲಿ: ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿದ್ದು, ಈ ಬಗ್ಗೆ ತಿಳಿವಳಿಕೆ ಹೇಳಬೇಕು ಎಂದು ಒತ್ತಾಯಿಸಿ ರಾಜ್ಯಸಭೆ ಸದಸ್ಯ ಎಚ್.ಡಿ. ದೇವೆಗೌಡ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

‘ಬಜೆಟ್ ಅಧಿವೇಶನದ ವೇಳೆ ಪ್ರತಿಪಕ್ಷಗಳ ಸದಸ್ಯರು ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಅದರಲ್ಲಿಯೂ ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಹಾಗೂ ಆವರಣದಲ್ಲಿ ಘೋಷಣೆ ಕೂಗುವುದು, ಫಲಕ ಪ್ರದರ್ಶನ ಮಾಡುವುದು, ನಿರ್ದಿಷ್ಟವಾಗಿ ಹೆಸರು ಕೂಗುವುದು, ಧರಣಿ ಮತ್ತು ಕಲಾಪ ಸ್ಥಗಿತ ಆಗುವಂತೆ ಮಾಡುತ್ತಿದ್ದಾರೆ. ಇದು ಸಂಸತ್ತಿನ ಘನತೆ ಕುಗ್ಗಿಸುತ್ತಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಧಕ್ಕೆ ಉಂಟು ಮಾಡುತ್ತದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

‘ವಿರೋಧ ಪಕ್ಷದ ನಾಯಕನ ಕರ್ತವ್ಯ ಸುಲಭವಲ್ಲ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅವರ ಎದುರು ಬೆಟ್ಟದಷ್ಟು ಸವಾಲುಗಳು ಇರುತ್ತವೆ. ಜನರ ಸಂಕಷ್ಟಗಳ ಬಗ್ಗೆ ಕಾಲ ಕಾಲಕ್ಕೆ ಸರ್ಕಾರದ ಗಮನಕ್ಕೆ ತರಬೇಕಾಗುತ್ತದೆ. ಹಾಗಿದ್ದರೂ ಪ್ರತಿಭಟನೆ ಮಾಡುವ ಸಂದರ್ಭ ಬಂದರೆ ಅದಕ್ಕೆ ತನ್ನದೇ ಆದ ರೀತಿನೀತಿ ಇರುತ್ತದೆ. ಅಂತಹ ಸಂದರ್ಭದಲ್ಲಿ ಪೀಠಕ್ಕೆ ಅಗೌರವ ತೋರುವ, ಅಪಚಾರ ಎಸಗುವ ಕೆಲಸ ಆಗಬಾರದು. ಸಂಸದೀಯ ನಿಯಮ, ಕಟ್ಟುಪಾಡುಗಳನ್ನು ಮೀರದೆ ಕಾರ್ಯ ನಿರ್ವಹಣೆ ಮಾಡುವುದರಲ್ಲಿ ವಿರೋಧ ಪಕ್ಷ ನಾಯಕನ ಯಶಸ್ಸು ಅಡಗಿದೆ’ ಎಂದು ಅವರು ಹೇಳಿದ್ದಾರೆ.

‘ಸಂಸತ್ತಿನ ಮೆಟ್ಟಿಲುಗಳ ಮೇಲೆ ಚಹಾ ಸೇವನೆ ಮಾಡುವುದು ಸರಿಯಾದ ನಡವಳಿಕೆ ಅಲ್ಲ. ಈ ಹಿಂದೆ ವಿರೋಧ ಪಕ್ಷಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಗೌರವಿಸಿ, ಸಂಯಮದಿಂದ ವರ್ತಿಸಿದ್ದವು. ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ, ಬಿಸ್ಕತ್ತು, ಪಕೋಡಾ ತಿನ್ನುವುದು ಅತಿರೇಕದ ಕ್ರಮಗಳು. ಇವು ಅನುಚಿತ’ ಎಂದು ಗೌಡರು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.