ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ: ವಿಶ್ವನಾಥ್ ಟೀಕೆ

Published 2 ಜೂನ್ 2023, 6:30 IST
Last Updated 2 ಜೂನ್ 2023, 6:30 IST
ಅಕ್ಷರ ಗಾತ್ರ

ಮೈಸೂರು: ನೂತನ ಸಂಸತ್ ಭವನ ಉದ್ಘಾಟನೆಯು ಮೋದಿ ಅವರ ಪಟ್ಟಾಭಿಷೇಕದಂತೆ ಇದ್ದು, ಅಂದಿನ ಘಟನಾವಳಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಟೀಕಿಸಿದರು.

ಅಂದಿನ ಕಾರ್ಯಕ್ರಮದಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರಿಗೆ ಗೌರವ ಸಿಗಲಿಲ್ಲ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾರ್ಯಕ್ರಮದಿಂದ ದೂರ ಇಡುವ ಮೂಲಕ ಪ್ರಧಾನಿಯೇ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಇದು ತಳ ಸಮುದಾಯಗಳಿಗೆ ಮಾಡಿದ ಅವಮಾನ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಹೊಸ ಸಂಸತ್ತಿನಲ್ಲಿ ರಾಷ್ಟ್ರ ಲಾಂಛನವಾದ ಅಶೋಕ ಚಕ್ರವನ್ನು ಬಿಟ್ಟು ಧರ್ಮ ಲಾಂಛನವನ್ನು ಇಟ್ಟಿದ್ದು ಸರಿಯಲ್ಲ. ಸಂಸತ್ ಭವನದಲ್ಲಿ ಹೋಮ, ಹವನಗಳು ಪುರೋಹಿತಶಾಹಿ ವ್ಯವಸ್ಥೆಯ ಮರುಸ್ಥಾಪನೆಯಂತಿದೆ. ಬಸವೇಶ್ವರರಿಗೂ ಅವಮಾನ ಮಾಡಲಾಗಿದೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT