ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Parliament Security Breach: ಸಮಗ್ರ ತನಿಖೆಗೆ ಡಿ.ಕೆ. ಶಿವಕುಮಾರ್ ಒತ್ತಾಯ

Published 13 ಡಿಸೆಂಬರ್ 2023, 11:38 IST
Last Updated 13 ಡಿಸೆಂಬರ್ 2023, 11:38 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆಯಲ್ಲಿ ಭದ್ರತಾ ಲೋಪ ಉಂಟಾಗಿರುವ ಘಟನೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ನಮ್ಮ ಸಂಸತ್, ದೇಶದ ಅತ್ಯಂತ ಸುರಕ್ಷಿತ ಪ್ರದೇಶಗಳಲ್ಲಿ ಒಂದಾಗಿದೆ. ಯಾವುದೇ ಕಾರಣಕ್ಕೂ ಭದ್ರತಾ ಲೋಪವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಗಂಭೀರ ಭದ್ರತಾ ಲೋಪದ ಕುರಿತು ಸಮಗ್ರ ತನಿಖೆ ಕೈಗೊಳ್ಳಬೇಕು. ಆ ಮೂಲಕ ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT