ಬೆಂಗಳೂರು: ‘ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಆಗಿದೆ ಎಂದು ಬಸವರಾಜ ರಾಯರಡ್ಡಿ ಯಾವ ಅರ್ಥದಲ್ಲಿ ಹೇಳಿದ್ದಾರೆಂದು ಅವರೇ ವಿವರಣೆ ನೀಡಬೇಕು. ಭ್ರಷ್ಟಾಚಾರದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎನ್ನುವುದನ್ನೂ ಅವರು ಹೇಳಬೇಕಿತ್ತು’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಯರಡ್ಡಿ ಅವರ ಮಾತಿನಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಅವರ ಹೇಳಿಕೆಯನ್ನು ಪಕ್ಷವು ಗಮನಿಸಿದೆ. ಯಾರೂ ಪಕ್ಷಕ್ಕಿಂತ ದೊಡ್ಡವರಿಲ್ಲ’ ಎಂದರು.

‘ರಾಯರಡ್ಡಿ ಹಿರಿಯರು. ಯಾರು ಎಷ್ಟೆಷ್ಟು ಹಣ ಪಡೆದಿದ್ದಾರೆ ಎಂದೂ ಹೇಳಬೇಕಲ್ಲವೇ’ ಎಂದೂ ಅಸಮಾಧಾನ ಹೊರಹಾಕಿದರು.

‘ಭ್ರಷ್ಟಾಚಾರ ನಡೆದಿದೆ ಎಂದಿಲ್ಲ’: ‘ಭ್ರಷ್ಟಾಚಾರ ನಡೆದಿದೆ ಎಂದು ಮಾಧ್ಯಮಗಳ ಮುಂದೆ ರಾಯರಡ್ಡಿ ಹೇಳಿಲ್ಲ. ಅವರು ಸಾಮಾನ್ಯವಾಗಿ ಚರ್ಚೆ ಮಾಡಿರಬಹುದು. ಹೀಗಿರುವಾಗ ಕ್ರಮ ತೆಗೆದುಕೊಳ್ಳುವ ವಿಚಾರ ಎಲ್ಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.