ಪಾವಗಡ: ಮಾಜಿ ಸಚಿವ ವೆಂಕಟರಮಣಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ತಾಲ್ಲೂಕಿನ ಹನುಮಂತನಹಳ್ಳಿ ತೋಟದ ಮನೆಯಲ್ಲಿ ಶನಿವಾರ ನೆರವೇರಿತು.

ಸಹಸ್ರಾರು ಅಭಿಮಾನಿಗಳು ಶನಿವಾರವೂ ಅಂತಿಮ ದರ್ಶನ ಪಡೆದರು.

ಪೊಲೀಸರು ಕುಶಾಲ ತೋಪು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಸಿದ್ದರಾಮೇಶ್ವರ ಸ್ವಾಮೀಜಿ, ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ 19ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳು ಪಾಲ್ಗೊಂಡು, ಅಂತಿಮ ದರ್ಶನ ಪಡೆದರು. ಮರಿದಾಸನಹಳ್ಳಿಯ ರಸ್ತೆಯಲ್ಲಿರುವ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದು ಮಾತನಾಡಿ, ವೆಂಕಟರಮಣಪ್ಪ ಅವರು ತಳಸಮುದಾಯದ ಬಗ್ಗೆ ಅಪಾರ ಕಾಳಜಿಯುಳ್ಳ ಜನನಾಯಕ. ಅವರೊಬ್ಬ ಅಹಿಂದ ಪರ ನಾಯಕರಾಗಿದ್ದರು. ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತಿದ್ದರು. ರೈತರ ಪರವಾಗಿ ಅಪಾರ ಕಾಳಜಿ ಹೊಂದಿದ್ದರು ಎಂದರು.

ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ‘ವೆಂಕಟರಮಣಪ್ಪ ಅವರು 2008ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಹಕಾರ ನೀಡಿದ್ದರು. ಹಾಗಾಗಿ ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಅವರು ನಮಗೆ ಒಬ್ಬ ಶ್ರೇಷ್ಟ ಗೆಳೆಯ’ ಎಂದು ಸ್ಮರಿಸಿದರು.

ಶಾಸಕರಾದ ಕೆ.ಜೆ.ಜಾರ್ಜ್, ಜಮೀರ್ ಅಹಮ್ಮದ್, ಕೆ.ಎನ್.ರಾಜಣ್ಣ, ಯತೀಂದ್ರ ಸಿದ್ದರಾಮಯ್ಯ, ರಾಜೇಂದ್ರ ರಾಜಣ್ಣ ಹಾಗೂ ಪರಿಟಾಲ ಸುನಿತಮ್ಮ, ಕಲ್ಯಾಣದುರ್ಗಂ ಶಾಸಕ ಅಮಲಿನೇನಿ ಸುರೇಂದ್ರಬಾಬು, ಮಾಜಿ ಸಂಸದ ಮುದ್ದುಹನುಮೇಗೌಡ, ಜನಾರ್ಧನಸ್ವಾಮಿ, ಗೂಳಿಹಟ್ಟಿ ಶೇಖರ್, ರಘುವೀರಾರೆಡ್ಡಿ, ವೈ.ಎ.ನಾರಾಯಣಸ್ವಾಮಿ, ಸುದಾಕರ್, ನಿಂಗಪ್ಪ, ಶಾಂತಲ ರಾಜಣ್ಣ, ಸೂರನಹಳ್ಳಿ ಶ್ರೀನಿವಾಸ ಸೇರಿದಂತೆ ಹಲವು ಮುಖಂಡರು ಅಂತಿಮ ದರ್ಶನ ಪಡೆದರು.

ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿನಿ, ತಹಶೀಲ್ದಾರ್ ವೈ. ರವಿ ಅವರ ಉಸ್ತುವಾರಿಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಮತ್ತು ಅಗತ್ಯ ವ್ಯವಸ್ಥೆ ಮಾಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-18-823535988

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.