ಬೆಂಗಳೂರು: ವೇತನ ಪರಿಷ್ಕರಣೆಯ ಹಿಂಬಾಕಿ ಕುರಿತು ಮುಂದಿನ ವಾರ ಮತ್ತೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಕುರಿತು ಸರ್ಕಾರದ ಯಾವುದೇ ಆದೇಶ ಇಲ್ಲ ಎಂದು ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜತೆ ನಡೆದ ಸಭೆಯಲ್ಲಿ ಹೇಳಿದರು.

ರಾಜ್ಯ ಸರ್ಕಾರವು 2020 ರ ಜನವರಿ 1 ರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ಪಾವತಿಸಬೇಕು. 2024 ರ ಜನವರಿ 1 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು ಮತ್ತು ಆ ದಿನದಿಂದ ಇಂದಿನವರೆಗಿನ ಹಿಂಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಬೇಡಿಕೆ ಮುಂದಿಟ್ಟರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.