ಬೆಂಗಳೂರು: ‘ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,574 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

‘ಇದೇ 3ರಂದು ಆರಂಭಗೊಂಡ ವರ್ಗಾವಣೆ ಪ್ರಕ್ರಿಯೆ 12 ದಿನ ನಡೆಯಿತು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳಿಗೆ (ಅಂಗವಿಕಲರು, ಗಂಭೀರ ಅನಾರೋಗ್ಯ ಮತ್ತು ಪತಿ-ಪತ್ನಿ ಪ್ರಕರಣ) ಸಂಬಂಧಿಸಿದಂತೆ ವರ್ಗಾವಣೆಗೆ ಪ್ರತ್ಯೇಕವಾಗಿ ಕೌನ್ಸೆಲಿಂಗ್ ನಡೆಸಲಾಯಿತು. ಮಾನದಂಡಗಳಂತೆ ಅಂಗವಿಕಲ ಸೌಲಭ್ಯಕ್ಕೆ ಅರ್ಹರಾದ 61 ಮಂದಿ, ಗಂಭೀರ ಕಾಯಿಲೆ ಎದುರಿಸುತ್ತಿರುವ 29 ಮತ್ತು 56 ಒಂಟಿ ಮಹಿಳೆಯರು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಲಾಭ ಪಡೆದಿದ್ದಾರೆ. ಅಲ್ಲದೆ, ಪತಿ-ಪತ್ನಿ ಪ್ರಕರಣಗಳಲ್ಲಿ 213 ಮಂದಿಗೆ ವರ್ಗಾವಣೆ ಸೌಲಭ್ಯ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಒಂದೇ ಸ್ಥಳದಲ್ಲಿ ಐದು ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ 1,064 ಪಿಡಿಒಗಳನ್ನು ಅವರ ಆಯ್ಕೆಗೆ ಅನುಗುಣವಾಗಿ ಕಡ್ಡಾಯ ವರ್ಗಾವಣೆ ಮಾಡಲಾಗಿದೆ. 151 ಪಿಡಿಒಗಳು ಸಾಮಾನ್ಯ ವರ್ಗಾವಣೆಯ ಲಾಭ ಪಡೆದಿದ್ದಾರೆ’ ಎಂದೂ ಅವರು ಮಾಹಿತಿ ನೀಡಿದ್ದಾರೆ.

‘ಕೌನ್ಸೆಲಿಂಗ್ ಮೂಲಕ ವರ್ಗಾವಣೆ ವ್ಯವಸ್ಥೆ ಜಾರಿಗೆ ತರಬೇಕು ಎನ್ನುವುದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬಹು ದಿನಗಳ ಬೇಡಿಕೆ ಆಗಿತ್ತು. ಈಗ ಯಶಸ್ವಿಯಾಗಿ ವರ್ಗಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ವರ್ಗಾವಣೆಗೆ ಅರ್ಹರಾಗಿದ್ದ ಪಿಡಿಒಗಳು ಯಾವುದೇ ಅಲೆದಾಟ, ಆತಂಕಗಳಿಲ್ಲದೆ ನಿರಾಯಾಸವಾಗಿ ತಮ್ಮ ಇಚ್ಛೆಯಂತೆ ಪಾರದರ್ಶಕವಾಗಿ ಸ್ಥಾನ ಬದಲಾವಣೆಯ ಸೌಲಭ್ಯ ಪಡೆದಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.