ಹೊಳೆನರಸೀಪುರ (ಹಾಸನ ಜಿಲ್ಲೆ): ‘ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ, ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದ್ದು, ಜನಸಾಮಾನ್ಯರು ನೆಮ್ಮದಿಯಿಂದ ಓಡಾಡುತ್ತಿದ್ದಾರೆ. ಈಗ ಅಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೆಯೋ ಬಿಡುತ್ತಾರೆಯೋ ಕೇಳಬಾರದು. ಪ್ರಧಾನಿ ಮೋದಿ ಒಳ್ಳೆಯ ಕೆಲಸ ಮಾಡಿದ್ದು, ಜನ ನೆಮ್ಮದಿಯಿಂದಂತೂ ಮತ ಚಲಾಯಿಸುತ್ತಾರೆ’ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪ್ರತಿಪಾದಿಸಿದರು.