ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆನ್‌ಡ್ರೈವ್‌ ಪ್ರಕರಣ | ಸಮಾಜ ತಲೆತಗ್ಗಿಸುವ ಕೃತ್ಯ: ಬಿ.ವೈ. ವಿಜಯೇಂದ್ರ

Published 30 ಏಪ್ರಿಲ್ 2024, 14:23 IST
Last Updated 30 ಏಪ್ರಿಲ್ 2024, 14:23 IST
ಅಕ್ಷರ ಗಾತ್ರ

ಬೆಂಗಳೂರು: ‘ಹಾಸನದ ಪೆನ್‌ಡ್ರೈವ್‌ ಪ್ರಕರಣ ಕುರಿತು ಮೌನವಹಿಸುವ ಪ್ರಶ್ನೆಯೇ ಇಲ್ಲ. ನಾಗರಿಕ ಸಮಾಜ ತಲೆತಗ್ಗಿಸುವ ಇಂತಹ ಕೃತ್ಯವನ್ನು ಖಂಡಿಸುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಹೇಳಿಕೆ ಹಂಚಿಕೊಂಡಿರುವ ಅವರು, ಮಹಿಳಾ ಶೋಷಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂಥವರಿಂದ ಹೇಳಿಸಿಕೊಳ್ಳಬೇಕಾದ ದುರ್ಗತಿ ಬಿಜೆಪಿಗೆ ಬಂದಿಲ್ಲ. ಪ್ರಕರಣ ಕುರಿತು ನೇಮಕವಾಗಿರುವ ಎಸ್‌ಐಟಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯವನ್ನು ಪಕ್ಷ ಎಂದಿಗೂ ಸಹಿಸದು. ಹಾಸನದ ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸೇರಿದಂತೆ ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆದು, ಕ್ರಮ ಜರುಗಿಸಲಿ. ಹಾಗೆಯೇ, ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯೂ ದಿಕ್ಕುತಪ್ಪದಿರಲಿ ಎಂದಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ವಿಚಾರ ಹಿಂದೆ ಬಿದ್ದಿದೆ. ಮಹಿಳೆಯರ ರಕ್ಷಣೆಗೂ ಆದ್ಯತೆ ನೀಡಿಲ್ಲ. ಬೆಳಗಾವಿ ಮಹಿಳಾ ದೌರ್ಜನ್ಯ ಪ್ರಕರಣ, ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ಹತ್ಯೆ ಪ್ರಕರಣಗಳಲ್ಲಿ ಸರ್ಕಾರ ನಡೆದುಕೊಂಡ ರೀತಿಯೇ ಸಾಕ್ಷಿ. ಅಂತಹ ಕಾಂಗ್ರೆಸ್‌ ನಾಯಕರಿಗೆ ಬಿಜೆಪಿಯತ್ತ ಬೊಟ್ಟು ಮಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT