ಬೆಂಗಳೂರು: ‘ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪದ ಸಂತ್ರಸ್ತ ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಪ್ರಕರಣದ ಆರೋಪಿಯಾದ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕು’ ಎಂದು ಕೋರಿ ಎಸ್ಐಟಿ ಹೈಕೋರ್ಟ್ಗೆ ಮನವಿ ಮಾಡಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ರೇವಣ್ಣ ಅರ್ಜಿ: ‘ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಮನೆಗೆಲಸದಾಕೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮವಾಗಿ ಹೊಳೆನರಸೀಪುರ ಮತ್ತು ಕೆ.ಆರ್.ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ರದ್ದುಪಡಿಸಬೇಕು’ ಎಂದು ಕೋರಿ ಎಚ್.ಡಿ.ರೇವಣ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಎಚ್.ಡಿ.ರೇವಣ್ಣ ಎರಡು ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ಸಲ್ಲಿಸಿದ್ದು, ಇವುಗಳು ಇನ್ನೂ ವಿಚಾರಣೆಗೆ ಬರಬೇಕಿದೆ. ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಹಾಗೂ ಎಸ್ಐಟಿಯನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.