ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆನ್‌ಡ್ರೈವ್: ಎಸ್‌ಐಟಿ ರಚನೆಗೆ ಮಹಿಳಾ ಆಯೋಗ ಮನವಿ

Published 25 ಏಪ್ರಿಲ್ 2024, 16:08 IST
Last Updated 25 ಏಪ್ರಿಲ್ 2024, 16:08 IST
ಅಕ್ಷರ ಗಾತ್ರ

ಬೆಂಗಳೂರು: ‘ಹಾಸನದ ಪೆನ್‌ಡ್ರೈವ್‌ವೊಂದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿದ್ದು, ಇದರಿಂದ ಮಹಿಳೆಯರ ಘನತೆಗೆ ಧಕ್ಕೆ ಉಂಟಾಗುತ್ತಿದೆ. ಈ ಸಂಬಂಧ ತನಿಖೆ ನಡೆಸಲು ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕು’ ಎಂದು ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆಗೆ ಪತ್ರ ಬರೆದಿದ್ದಾರೆ.

‘ಮಹಿಳೆಯರನ್ನು ದುರುಪಯೋಗಪಡಿಸಿಕೊಂಡು ಲೈಂಗಿಕವಾಗಿ ಬಳಸಿಕೊಂಡು ವಿಡಿಯೊ ಚಿತ್ರೀಕರಣ ಮಾಡಿಕೊಳ್ಳಲಾಗಿದೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಜೊತೆಗೆ, ದೌರ್ಜನ್ಯದ ವಿಡಿಯೊಗಳು ಹಲವೆಡೆ ಹರಿದಾಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹಲವು ಸಂಘಟನೆಗಳು ಆಯೋಗಕ್ಕೆ ಮನವಿಗಳು ಬಂದಿವೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

‘ದೃಶ್ಯಗಳನ್ನು ಚಿತ್ರೀಕರಿಸಿರುವ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಬೇಕಿದೆ. ಮಹಿಳೆಯರ ಘನತೆಗೆ ಧಕ್ಕೆ ತಂದವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ, ಎಸ್‌ಐಟಿ ತನಿಖೆ ಅಗತ್ಯವಿದೆ’ ಎಂಬುದಾಗಿಯೂ ಪತ್ರದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT