ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ದಂಡ

Published 8 ಜುಲೈ 2024, 19:35 IST
Last Updated 8 ಜುಲೈ 2024, 19:35 IST
ಅಕ್ಷರ ಗಾತ್ರ

ಬೆಂಗಳೂರು: ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ದಂಡ ವಿಧಿಸಿದೆ.

ಅಗತ್ಯ ಸಂಖ್ಯೆಯ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳದೇ ಇರುವುದು, ಪ್ರಯೋಗಾಲಯಗಳ ಕೊರತೆ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದು, ತನಿಖೆಗಳ ಸಮಯದಲ್ಲಿ ಅಗತ್ಯವಾದ ಮಾಹಿತಿಗಳನ್ನು ಒದಗಿಸದ ಕಾರಣಗಳಿಗಾಗಿ ಕಾಲೇಜುಗಳಿಗೆ ದಂಡ ವಿಧಿಸಲಾಗಿದೆ. ಅವುಗಳಲ್ಲಿ 11 ಖಾಸಗಿ ವೈದ್ಯಕೀಯ ಕಾಲೇಜುಗಳೂ ಸೇರಿವೆ. 

ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮಂಡ್ಯ, ಯಾದಗಿರಿ, ಶಿವಮೊಗ್ಗ, ಕಾರವಾರ, ಮೈಸೂರು, ಕಲಬುರಗಿ, ಹುಬ್ಬಳ್ಳಿ, ಕೊಡಗು, ಚಾಮರಾಜ ನಗರ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಹಾಗೂ ಎರಡು ಇಎಸ್‌ಐ ಕಾಲೇಜುಗಳು ದಂಡನೆಗೆ ಒಳಗಾಗಿವೆ. ವಿಧಿಸಿದ ದಂಡದ ಮೊತ್ತ ₹3 ಲಕ್ಷದಿಂದ ₹15 ಲಕ್ಷದವರೆಗೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT