ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸಲು ಆರು ತಿಂಗಳ ಕಾಲಾವಕಾಶ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವಾಲಯವು ಸುಪ್ರೀಂ ಕೋರ್ಟ್ಗೆ ಕೋರಿದೆ.

ಜಲವಿವಾದ ಬಗೆಹರಿಸಲು ಒಂದು ತಿಂಗಳಲ್ಲಿ ನ್ಯಾಯಮಂಡಳಿ ರಚಿಸಬೇಕು ಎಂದು ನ್ಯಾಯಮೂರ್ತಿ ವಿಕ್ರಮ್ನಾಥ್ ನೇತೃತ್ವದ ಪೀಠವು ಜಲಶಕ್ತಿ ಸಚಿವಾಲಯಕ್ಕೆ ಫೆಬ್ರುವರಿ 2ರಂದು ನಿರ್ದೇಶನ ನೀಡಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವ ಜಲಶಕ್ತಿ ಸಚಿವಾಲಯ, ‘ನ್ಯಾಯಮಂಡಳಿ ರಚನೆಗೆ ಏಪ್ರಿಲ್ನಿಂದ ಅನ್ವಯವಾಗುವಂತೆ ಆರು ತಿಂಗಳ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದೆ.

‘ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸಲು ಸಚಿವಾಲಯವು ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ನ್ಯಾಯಮಂಡಳಿ ರಚನೆಗೆ ಅಂತರ್ ಇಲಾಖೆಗಳ ಜತೆಗೆ ಸಮಾಲೋಚನೆ ನಡೆಸಲಾಗಿದೆ. ವಿವಿಧ ಇಲಾಖೆಗಳ ಅಭಿಪ್ರಾಯ ಪಡೆದು ಸಚಿವ ಸಂಪುಟ ಟಿಪ್ಪಣಿ ಸಿದ್ಧಪಡಿಸಲಾಗಿದೆ. ಕೇಂದ್ರ ಸಚಿವ ಸಂಪುಟದ ಪರಿಗಣನೆಗೆ ಕರಡು ಟಿಪ್ಪಣಿಯನ್ನು ಸಚಿವ ಸಂಪುಟ ಕಾರ್ಯದರ್ಶಿ ಅವರಿಗೆ ಕಳುಹಿಸಲಾಗಿದೆ‘ ಎಂದು ಸಚಿವಾಲಯ ಮಾಹಿತಿ ನೀಡಿದೆ.

‘ಸಂಪುಟದ ಅನುಮೋದನೆಯ ನಂತರ, ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆ– 1956 ರ ಪ್ರಕಾರ ನ್ಯಾಯಮಂಡಳಿಗೆ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗೆ ನಾಮನಿರ್ದೇಶನ ಮಾಡುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಅವರಿಗೆ ಕೋರಿಕೆ ಸಲ್ಲಿಸಲಾಗುತ್ತದೆ. ನಾಮನಿರ್ದೇಶನ ಮಾಡಿದ ನಂತರ, ಕರಡು ಅಧಿಸೂಚನೆಯನ್ನು ಕಾನೂನು ವ್ಯವಹಾರಗಳ ಸಚಿವಾಲಯ ಸಿದ್ಧಪಡಿಸುತ್ತದೆ. ಆ ನಂತರ, ನ್ಯಾಯಮಂಡಳಿ ರಚನೆಯ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಪ್ರಕ್ರಿಯೆಗಳನ್ನು ನಡೆಸಲು ಸಮಯಾವಕಾಶ ಬೇಕಾಗುತ್ತದೆ‘ ಎಂದು ಸಚಿವಾಲಯ ತಿಳಿಸಿದೆ.

ದಕ್ಷಿಣ ಪಿನಾಕಿನಿ ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪೆನ್ನಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ಗೆ 2018ರ ಮೇ 18ರಂದು ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.