ಬಡವರ ವಿರೋಧಿ ಕ್ರಮ: ವಿ.ಸುನಿಲ್‌ಕುಮಾರ್
‘ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ಯೋಜನೆಯಡಿ 23.19 ಲಕ್ಷ ಫಲಾನುಭವಿಗಳ ಪಿಂಚಣಿ ರದ್ದು ಮಾಡಲು ಹೊರಟಿರುವ ಕ್ರಮ ಬಡವರ ವಿರೋಧಿ’ ಎಂದು ಬಿಜೆಪಿ ಶಾಸಕ ವಿ.ಸುನಿಲ್‌ಕುಮಾರ್ ಟೀಕಿಸಿದ್ದಾರೆ.
‘ಬಡವರ ಬಗ್ಗೆ ಕಾಳಜಿ, ಸಹಾನುಭೂತಿ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರವಚನ ಮಾಡಿದ್ದರು. ಈಗ ಬಡವರ ಮೇಲೆ ಪ್ರಹಾರ ಮಾಡಲು ಹೊರಟಿದ್ದಾರೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಅಡಿ ವೃದ್ಧರು, ಅಸಹಾಯಕರು, ದುರ್ಬಲರಿಗೆ ನೀಡುತ್ತಿದ್ದ ಪಿಂಚಣಿ ಹಣದ ಮೇಲೆ 60 ಪರ್ಸೆಂಟ್ ಸರ್ಕಾರದ ಕಣ್ಣು ಬಿದ್ದಿದೆ’ ಎಂದಿದ್ದಾರೆ,
‘ತಮ್ಮದು ಆಲಿಸುವ ಸರ್ಕಾರ ಎಂದು ಜಾಹೀರಾತಿನಲ್ಲಿ ಫೋಸು ಕೊಡುವ ಕಾಂಗ್ರೆಸ್ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ. ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ’ ಎಂದು ಸುನಿಲ್ ಪ್ರಶ್ನಿಸಿದ್ದಾರೆ.