ಬೆಂಗಳೂರು: ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನರಿಗೆ ರಾಜ್ಯ ಸರ್ಕಾರ ನೀಡುವ ಪಿಂಚಣಿ ಸ್ಥಗಿತ ಗೊಂಡಿದೆ. ಖಜಾನೆ ಖಾಲಿಯಾಗಿದ್ದರೂ ರಾಜ್ಯ ಸರ್ಕಾರ ಸಾಧನಾ ಸಮಾವೇಶ ಮಾಡಲು ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ನೇತೃತ್ವದ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ, ಸಂಭ್ರಮಾಚರಣೆ ಮಾಡುತ್ತಿದೆ. ಗೃಹಲಕ್ಷ್ಮಿಯ ₹5,000 ಕೋಟಿ, ಅನ್ನಭಾಗ್ಯದ ₹700 ಕೋಟಿ ಇನ್ನೂ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನಾಥ ಮಕ್ಕಳ ₹73 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ ₹45,000 ಕೋಟಿ ಲೂಟಿಯಾಗಿದೆ. ಸಮೀಕ್ಷೆ ಹೆಸರಲ್ಲಿ ರೈತರಿಗೆ ಪರಿಹಾರ ಕೊಟ್ಟಿಲ್ಲ. 12 ಬಗೆಯ ಪಿಂಚಣಿಗಳನ್ನು 3 ತಿಂಗಳಿನಿಂದ ಕೊಟ್ಟಿಲ್ಲ. ₹81.88 ಲಕ್ಷ ಫಲಾನುಭವಿಗಳಿದ್ದು, ತಿಂಗಳಿಗೆ ₹894 ಕೋಟಿ ನೀಡಬೇಕಿದೆ’ ಎಂದರು.

ಎಸ್ಐಆರ್ಗೆ ಏಕೆ ವಿರೋಧ: ರಾಜ್ಯದಲ್ಲಿ 10 ಲಕ್ಷಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳಿದ್ದಾರೆ. ಪೊಲೀಸ್ ಆಯುಕ್ತರು ₹65 ಲಕ್ಷ ಖರ್ಚು ಮಾಡಿ ಬಾಂಗ್ಲಾದ 250 ಪ್ರಜೆಗಳನ್ನು ವಿಮಾನದಲ್ಲಿ ಗಡಿವರೆಗೆ ಬಿಟ್ಟು ಬಂದಿದ್ದಾರೆ. ಮಹದೇವ ಪುರ, ಚಿಕ್ಕಮಗಳೂರು, ಕೊಡಗು ಕಾಫಿ ಎಸ್ಟೇಟ್ಗಳಲ್ಲಿ ಸಾವಿರಾರು ಬಾಂಗ್ಲಾದೇಶೀಯರಿದ್ದಾರೆ. ಇದಕ್ಕೆ ಎಸ್ಐಆರ್ ಅಂತ್ಯವಾಡಲಿದೆ. ಗುರುತಿನ ಚೀಟಿ ಇದ್ದವರಿಗೆ ಭಯಬೇಡ. ಪ್ರತಿ ಬೂತ್ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಏಜೆಂಟ್ ಗಳಿರುವಾಗ ಅರ್ಹ ಮತದಾರರ ಹೆಸರು ರದ್ದಾಗಲು ಸಾಧ್ಯವೇ ಇಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.