ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣ ಕ್ಷೇತ್ರಕ್ಕೆ ತಾಲ್ಲೂಕು ಕೇಂದ್ರ ಬೇಕೆಂದು ಜನ ಕೇಳಿಲ್ಲ: ಸಿದ್ದರಾಮಯ್ಯ

Published 10 ಜೂನ್ 2023, 11:05 IST
Last Updated 10 ಜೂನ್ 2023, 11:05 IST
ಅಕ್ಷರ ಗಾತ್ರ

ಮೈಸೂರು: ವರುಣ ಕ್ಷೇತ್ರಕ್ಕೆ ತಾಲ್ಲೂಕು ಕೇಂದ್ರ ಬೇಕೆಂದು ಜನ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುತ್ತೂರು ಹೆಲಿಪ್ಯಾಡ್‌ನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾವು ಅಧಿಕಾರಕ್ಕೆ ಬಂದರೆ ವರುಣ ಕ್ಷೇತ್ರವನ್ನು ತಾಲ್ಲೂಕು ಮಾಡುತ್ತೇವೆ ಎಂದು ಚುನಾವಣೆ ಸಂದರ್ಭದಲ್ಲಿ ಹೇಳಿದ್ದರು. ಇದನ್ನು ಜನ ಕೇಳಿಲ್ಲ. ಬಿಜೆಪಿಯವರು ಹೇಳುತ್ತಿದ್ದಾರಷ್ಟೆ. ವರುಣ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ, ಎಲ್ಲಿಯೂ ಜನ ಈ ಬಗ್ಗೆ ಕೇಳಿಲ್ಲ. ಬಸವರಾಜ ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು ಮಾಡುವುದಿಲ್ಲ. ವರುಣ ಕ್ಷೇತ್ರದ ಜನ ಕೇಳಿದರೆ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.

ತನಿಖೆ ನಡೆಯುತ್ತಿದೆ: ಪಿ.ಎಸ್.ಐ ಅಕ್ರಮ ಹಾಗೂ ಶೇ 40 ಕಮಿಷನ್ ಆರೋಪದ ಬಗ್ಗೆ ಸರ್ಕಾರ ತನಿಖೆ ಮಾಡಲಿ ಎಂದು ಬಿಜೆಪಿ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅವರು ಕೇಳಿ ನಾವು ಮಾಡಬೇಕಿಲ್ಲ. ಸಾಕ್ಷಿಗಳ ಆಧಾರದ ಮೇಲೆ ಖಂಡಿತವಾಗಿಯೂ ಮಾಡುತ್ತೇವೆ ಎಂದರು. ಪಿ.ಎಸ್.ಐ ಹಗರಣದ ತನಿಖೆ ಈಗಾಗಲೇ ನಡೆಯುತ್ತಿದ್ದು ಎಡಿಜಿಪಿ ಪೌಲ್ ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಹಲವರ ಮೇಲೆ ತನಿಖೆ ನಡೆಯುತ್ತಿದೆ ಎಂದರು.

ಸುಳ್ಳು ಹೇಳುವುದಿಲ್ಲ: ನುಡಿದಂತೆ ನಡೆವ ಸರ್ಕಾರ ನಮ್ಮದು. ಬಿಜೆಪಿಯವರಂತೆ ಸುಳ್ಳು ಹೇಳುವುದಿಲ್ಲ. ಹೇಳಿದ್ದೆಲ್ಲವನ್ನೂ ಈಡೇರಿಸುತ್ತೇವೆ ಎಂದರು.

ಮಾಹಿತಿ ಸಂಗ್ರಹ: ಬಿಜೆಪಿ ಅಧಿಕಾರದಲ್ಲಿದ್ದಾಗ ತಮಗೆ ಬೇಕಾದವರಿಗೆ ಭೂಮಿ ನೀಡಿರುವ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ತಿಳಿಸಿರುವೆ ಎಂದು ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು‌ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸುತ್ತೂರು ಮಠಕ್ಕೆ ಶನಿವಾರ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.
ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು‌ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸುತ್ತೂರು ಮಠಕ್ಕೆ ಶನಿವಾರ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT