ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತನಾಡುವಾಗ ಸಂಯಮ ಇರಲಿ: ಹೈಕೋರ್ಟ್‌ ಎಚ್ಚರಿಕೆ

Published 3 ನವೆಂಬರ್ 2023, 16:34 IST
Last Updated 3 ನವೆಂಬರ್ 2023, 16:34 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾದೇಶಿಕ ಮತ್ತು ರಾಜ್ಯ ಭಾಷೆಗಳಲ್ಲಿ ಶಿಕ್ಷಣ ನೀಡುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್‌,‘ಉನ್ನತ ಹುದ್ದೆಯಲ್ಲಿ ಇರುವವರು ಮಾತನಾಡುವಾಗ ಸಂಯಮ ತೋರಬೇಕು‘ ಎಂದು ಹೇಳಿದೆ.

‘ಸಿಬಿಎಸ್‌ಸಿ ಮತ್ತು ಐಸಿಎಸ್ಇ ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಒಂದು ವಿಷಯವಾಗಿ ಭೋದಿಸಬೇಕು‘ ಎಂಬ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಲಾದ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಮೌಖಿಕವಾಗಿ ಈ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು, ‘ಪ್ರಾದೇಶಿಕ ಮತ್ತು ರಾಜ್ಯ ಭಾಷೆಗಳಲ್ಲಿ ಶಿಕ್ಷಣ ಪಡೆಯುವವರನ್ನು ಅಸಮರ್ಥರು ಎಂದು ಪರಿಗಣಿಸಬಾರದು. ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ಪಡೆದವರೂ ಯಶಸ್ವಿಯಾಗಬಹುದು. ನಾನೂ ಪ್ರಾದೇಶಿಕ ಭಾಷೆಯಲ್ಲೇ ಕಲಿತಿದ್ದೇನೆ. ಅದು ನನಗೆ ಎಂದಿಗೂ ಅಡ್ಡಿಯಾಗಲಿಲ್ಲ. ಭಾಷೆಗೆ ಸಂಬಂಧಿಸಿದ ವಿಚಾರಗಳನ್ನು ನ್ಯಾಯಾಲಯ ಅದರ ಕಾನೂನು ಅಂಶಗಳ ಆಧಾರದಲ್ಲಿ ಪರಿಗಣಿಸಬೇಕಾಗುತ್ತದೆ‘ ಎಂದು ಮೌಖಿಕವಾಗಿ ನುಡಿದರು.

ನ್ಯಾಯಪೀಠ ಈ ಹಿಂದೆ ನೀಡಿದ್ದ ನಿರ್ದೇಶನದಂತೆ ಅರ್ಜಿದಾರರ ಪರ ವಕೀಲರು; ಅರ್ಜಿದಾರ ಪೋಷಕರ ಮಕ್ಕಳು ಮತ್ತು ಅವರು ವ್ಯಾಸಂಗ ಮಾಡುತ್ತಿರುವ ಶಾಲೆಗಳ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ‘ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಅರ್ಜಿದಾರರೂ ತಮ್ಮ ಮಕ್ಕಳ ವಿವರಗಳನ್ನು ಸಲ್ಲಿಸಲಿ‘ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT