ಕಲಬುರ್ಗಿ: ಕ್ವಾರಂಟೈನ್ ಕೇಂದ್ರಗಳಲ್ಲಿ ವಾರಕ್ಕಿಂತ ಹೆಚ್ಚು ದಿನಗಳಿಂದ ವಾಸವಿದ್ದವರನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಿಂದ ಶುಕ್ರವಾರ ಜನರನ್ನು ಬಿಡುಗಡೆ ಮಾಡಲಾಯಿತು.

ರಾಯಚೂರು ಜಿಲ್ಲೆಯ 169 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 10,537 ಪೈಕಿ 3,980 ಜನರು ಬಿಡುಗಡೆಯಾಗಿದ್ದಾರೆ. 44 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳನ್ನು ಮುಚ್ಚಲಾಗಿದ್ದು, ಸದ್ಯಕ್ಕೆ 125 ಕ್ವಾರಂಟೈನ್ ಕೇಂದ್ರಗಳಲ್ಲಿ 6,557 ಜನರಿದ್ದಾರೆ. 3,315 ಪುರುಷರು ಮತ್ತು 3,242 ಮಹಿಳೆಯರು ಇದ್ದಾರೆ. ರಾಯಚೂರು ತಾಲ್ಲೂಕಿನಲ್ಲೇ ಅತಿ ಹೆಚ್ಚು 41 ಕ್ವಾರಂಟೈನ್ ಕೇಂದ್ರಗಳಿದ್ದು, 3006 ಜನರಿದ್ದಾರೆ.

ಬೀದರ್ ಜಿಲ್ಲೆಯಲ್ಲಿನ 635 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿದ್ದ 3068 ಪೈಕಿ 2648 ಜನರು ಬಿಡುಗಡೆಯಾಗಿದ್ದಾರೆ. ಶುಕ್ರವಾರ ಒಂದೇ ದಿನ 256 ಜನರು ಬಿಡುಗಡೆಯಾಗಿದ್ದು, ಮನೆಗೆ ಕಳುಹಿಸುವ ಮುನ್ನ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಯಿತು.

ಯಾದಗಿರಿ ಜಿಲ್ಲೆಯ 224 ಕ್ವಾರಂಟೈನ್ ಕೇಂದ್ರಗಳಲ್ಲಿ 14,643 ಜನರಿದ್ದಾರೆ. ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಜನರನ್ನು ಬಿಡುಗಡೆ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ 36 ಜನರನ್ನು ಬಿಡುಗಡೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.