ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಮಿಯೋಪಥಿ ಔಷಧಿ ವಿತರಣೆಗೆ ಅವಕಾಶ

Last Updated 23 ಮೇ 2020, 19:23 IST
ಅಕ್ಷರ ಗಾತ್ರ

ಬೆಂಗಳೂರು: ರೋಗನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿ ಔಷಧಿಗಳ ವಿತರಣೆಗೆ ಸರ್ಕಾರ ಅವಕಾಶ ನೀಡಿದೆ.

ಬೋರ್ಡ್‌ ಆಫ್ ಹೋಮಿಯೋಪಥಿ ಸಿಸ್ಟಮ್ ಆಫ್ ಮೆಡಿಸಿನ್‌ನ (ಬಿಎಚ್‌ಎಸ್‌ಎಮ್‌) ಅಧ್ಯಕ್ಷ ಡಾ.ಬಿ.ಟಿ. ರುದ್ರೇಶ್ ನೇತೃತ್ವದ ವೈದ್ಯರ ತಂಡ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೊರೊನಾ ಸೋಂಕಿನ ವಿರುದ್ಧ ಹೋರಾಟದಲ್ಲಿಹೋಮಿಯೋಪಥಿ ಔಷಧಿ ಹೇಗೆ ನೆರವಾಗಲಿದೆ ಎಂಬುದನ್ನು ವಿವರಿಸಿತು. ಇದೇ ವೇಳೆ ಬಿ.ಟಿ. ರುದ್ರೇಶ್ ಅವರು ಯಡಿಯೂರಪ್ಪ ಅವರಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿ ಮಾತ್ರೆಗಳನ್ನು ವಿತರಿಸಿದರು.

‘ಕೊರೊನಾ ಸೋಂಕು ಬರದಂತೆ ತಡೆಯಲು ಹೋಮಿಯೋಪಥಿ ಮಾತ್ರೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇನೆ. ಈಗ ಮುಖ್ಯಮಂತ್ರಿಯೇ ಮೆಚ್ಚುಗೆ ವ್ಯಕ್ತಪಡಿಸಿ, ರಾಜ್ಯದಾದ್ಯಂತ ಈ ಉಪಕ್ರಮವನ್ನು ಮುಂದುವರೆಸಲು ಸೂಚಿಸಿದ್ದಾರೆ. ಈ ಕಾರ್ಯಕ್ಕೆ ಹೋಮಿಯೋ‍ಪಥಿ ವೈದ್ಯರು ಕೈಜೋಡಿಸಬೇಕು’ ಎಂದು ರುದ್ರೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT