ಬೆಂಗಳೂರು: ‘ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಆದರೆ, ನಿಗದಿಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು’ ಎಂದು ಹೋಟೆಲ್ಗಳ ಸಂಘಗಳ ಪ್ರತಿನಿಧಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮತ್ತು ಈಗ ಇರುವ ಕೆಲವು ತೊಡಕುಗಳ ನಿವಾರಣೆಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಮತ್ತು ಸಾರಿಗೆ ಇಲಾಖೆ ಹಾಗೂ ಇತರ ಭಾಗೀದಾರರ ಜೊತೆ ಮುಖ್ಯಮಂತ್ರಿ ಶನಿವಾರ ಚರ್ಚೆ ನಡೆಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರ ಸಂಘ ಮತ್ತು ಟ್ಯಾಕ್ಸಿ ಮಾಲೀಕರ ಸಂಘದ ಪ್ರತಿನಿಧಿಗಳು, ಸರ್ಕಾರದ ಮುಂದೆ ಕೆಲವು ಬೇಡಿಕೆಗಳನ್ನು ಮುಂದಿಟ್ಟರು. ಈ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಆಶ್ವಾಸನೆ ನೀಡಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಹೋಟೆಲ್ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಸರ್ಕಾರದ ಮಾರ್ಗಸೂಚಿಯಂತೆ ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳನ್ನು ತೆರೆಯುವುದಾಗಿ ಹೋಟೆಲ್ಗಳ ಸಂಘದ ಪ್ರತಿನಿಧಿಗಳು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.