ಬೆಂಗಳೂರು: ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ ಜರ್ನಲಿಸ್ಟ್ ರವರ ವತಿಯಿಂದ ಆಯೋಜಿಸಲಾಗಿದ್ದ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಬಳಿಕ ಸುದ್ದಿಗಾರರ ಜತೆ ನಾನು ಯಾವ ತಪ್ಪನ್ನೂ ಎಸಗಿಲ್ಲ. ‘ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ವಕೀಲ ಅಭಿಷೇಕ್ ಮನು ಸಿಂಗ್ವಿ ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ’ ಎಂದರು.

ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟ:

ಬಿಜೆಪಿಯವರು ಸಿಎಂ ರಾಜಿನಾಮೆ ಬೇಡಿಕೆಯಿರಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ‘ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಬಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ’ ಎಂದರು.

‘ನಾನು ಬಡಜನರ ಪರವಾಗಿರುವುದೇ ವಿರೋಧಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು’ ಎಂಬ ಭ್ರಮೆಯಲ್ಲಿ ವಿರೋಧ ಪಕ್ಷಗಳಿವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.