ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವ್ಯಾಪಿಸುತ್ತಿರುವ ಭಯೋತ್ಪಾದನೆ, ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್‌

Published : 28 ಮಾರ್ಚ್ 2024, 16:19 IST
Last Updated : 28 ಮಾರ್ಚ್ 2024, 16:19 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ವ್ಯಾಪಿಸುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಏನೂ ನಡೆಯುತ್ತಿಲ್ಲ ಎಂದು ನಿರ್ಲಕ್ಷ್ಯ ಭಾವನೆಯಲ್ಲಿದೆ. ಕರ್ನಾಟಕ ಅತ್ಯಂತ ದುರ್ದೈವ ಪರಿಸ್ಥಿತಿಯಲ್ಲಿದೆ’ ಎಂದು ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್‌ ಹೇಳಿದರು.

‘ಎನ್‌ಐಎ ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ದಾಳಿ ನಡೆಸಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳ ಕುರಿತು ಮಾಹಿತಿ ಲಭಿಸಿದೆ. ಇಲ್ಲಿನ ಸ್ಫೋಟಕ್ಕೂ ಮಂಗಳೂರಿನ ಸ್ಫೋಟಕ್ಕೂ ಸಂಬಂಧ ಇದೆ ಎಂದು ಹೇಳಿದರೂ ಮುಖ್ಯಮಂತ್ರಿಯವರು ಅಲ್ಲಗಳೆಯುತ್ತಿದ್ದಾರೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

‘ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ದಿನ ಸರ್ಕಾರದ ಎಲ್ಲ ಪ್ರತಿನಿಧಿಗಳು ಇದು ಭಯೋತ್ಪಾದಕ ಚಟುವಟಿಕೆ ಅಲ್ಲ. ಎರಡು ಉದ್ಯಮಗಳ ನಡುವಿನ ವ್ಯಾಜ್ಯ ಎಂದು ಬಿಂಬಿಸಿದ್ದರು. ಭಯೋತ್ಪಾದನೆ ನಿಗ್ರಹಕ್ಕೆ ಪ್ರಯತ್ನ ಮಾಡದೇ ಸರ್ಕಾರವು ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ’ ಎಂದು ಅವರು ಹರಿಹಾಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT