ಬೆಂಗಳೂರು: ‘ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ದೂರು ಸಲ್ಲಿಸಲು ಸಂತ್ರಸ್ತೆಯರಿಗೆ ಪ್ರಚೋದನೆ ನೀಡಿದ ಆರೋಪಡಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ವಿರುದ್ಧ ದಾಖಲಿಸಿರುವ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಬೇಕು’ ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ಮತ್ತೊಂದು ಪೀಠಕ್ಕೆ ವರ್ಗಾಯಿಸಿದೆ.

ಈ ಸಂಬಂಧ ಮಠದ ತಾತ್ಕಾಲಿಕ ಉಸ್ತುವಾರಿ ಸ್ವಾಮೀಜಿ ಬಸವಪ್ರಭು ಸಲ್ಲಿ ಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ನ್ಯಾಯ
ಪೀಠವು ರಿಟ್ ಅರ್ಜಿಯ ಪ್ರತಿವಾದಿಗಳಾದ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ ಈ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಪೀಠದ ಜೊತೆಗೇ
ಈ ಅರ್ಜಿಯ ವಿಚಾರಣೆಯೂ ನಡೆಯ
ಬೇಕೆಂಬ ಅಂಶವನ್ನು ಪರಿಗಣಿಸಿತು.

ರಿಟ್ ಅರ್ಜಿಯಲ್ಲೇನಿದೆ?: ‘ಶಿವಮೂರ್ತಿ ಶರಣರ ವಿರುದ್ಧ ಪ್ರಕರಣ ದಾಖಲಿಸಲು ಬಾಲಕಿಯರಿಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಸವ ರಾಜನ್ ಮತ್ತಿತರ ಆರೋಪಿಗಳ ವಿರುದ್ಧ ವಂಚನೆ, ಬೆದರಿಕೆಯ ದೂರು ದಾಖಲಿಸ
ಲಾಗಿದೆ. ಆದರೆ, ಪೊಲೀಸರು ಈ ಪ್ರಕರಣದ ತನಿಖೆಯನ್ನು ಸಮರ್ಪಕ ವಾಗಿ ನಡೆಸುತ್ತಿಲ್ಲ. ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ಬೇರೆಡೆಗೆ ವರ್ಗಾಯಿಸಲು, ತನಿಖೆಗೆ ಮಹಿಳಾ ಪೊಲೀಸ್ ಅಧಿಕಾರಿಯನ್ನು ನೇಮಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಬಸವಪ್ರಭು ಕೋರಿದ್ದಾರೆ.

ಕ್ರಿಮಿನಲ್ ಅರ್ಜಿಯಲ್ಲೇನಿದೆ?: ‘ನಮ್ಮ ವಿರುದ್ಧದ ಪ್ರಕರಣ ಸುಳ್ಳು ಆರೋಪ ಗಳಿಂದ ಕೂಡಿದ್ದು ಅದನ್ನು ರದ್ದು
ಗೊಳಿಸಬೇಕು‘ ಎಂದು ಬಸವರಾಜನ್, ಸೌಭಾಗ್ಯ ಕೋರಿದ್ದಾರೆ. ಈ ಅರ್ಜಿಯು ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದಲ್ಲಿ ಮಂಗಳವಾರಕ್ಕೆ (ಮಾ.21) ವಿಚಾರಣೆಗೆ ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.