ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ಧಸಿರಿಗೆ ನೋಟಿಸ್‌ ಪ್ರಶ್ನಿಸಿದ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Published 14 ಆಗಸ್ಟ್ 2024, 16:09 IST
Last Updated 14 ಆಗಸ್ಟ್ 2024, 16:09 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಿರ್ದೇಶಕರಾಗಿರುವ ಕಲಬುರಗಿ ಚಿಂಚೋಳಿ ತಾಲ್ಲೂಕಿನಲ್ಲಿರುವ ಸಿದ್ಧಸಿರಿ ಸಕ್ಕರೆ ಕಾರ್ಖಾನೆಯ, ಎಥೆನಾಲ್ ಘಟಕ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೀಡಿದ್ದ ನೋಟಿಸ್ ಪ್ರಶ್ನಿಸಲಾದ ಅರ್ಜಿ ಮೇಲಿನ ತೀರ್ಪನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಈ ಸಂಬಂಧ ಯತ್ನಾಳ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ಮುಕ್ತಾಯಗೊಳಿಸಿತು. ಅಂತೆಯೇ ಆದೇಶ ಕಾಯ್ದಿರಿಸಿರುವುದಾಗಿ ತಿಳಿಸಿತು.

ಪ್ರಕರಣವೇನು?: ‘ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಹೊರವಲಯದಲ್ಲಿರುವ ಸಿದ್ಧಸಿರಿ ಎಥನಾಲ್ ಮತ್ತು ಪವರ್ ಘಟಕವನ್ನು ಅರ್ಜಿದಾರರು 2021ರಲ್ಲಿ ಖರೀದಿಸಿದ್ದಾರೆ. ಇದಕ್ಕೆ ಅಗತ್ಯ ಅನುಮತಿ ಪಡೆದಿಲ್ಲ ಹಾಗೂ ಕೆಲವು ಪರಿಸರ  ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂಬ ಆರೋಪದಡಿ ಕಾರ್ಖಾನೆಯನ್ನು ಮುಚ್ಚುವಂತೆ ಕಲಬುರಗಿ ವಲಯದ ಕೆಎಸ್‌ಪಿಸಿಬಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT