ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರ್ಧಾರ ಹಿಂಪಡೆಯಲು ಬಿ.ವೈ. ವಿಜಯೇಂದ್ರ ಆಗ್ರಹ

Published 20 ಜೂನ್ 2024, 7:32 IST
Last Updated 20 ಜೂನ್ 2024, 7:32 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಆದೇಶ ಹಿಂಪಡೆಯ ಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.

ಪಕ್ಷದ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದ ವರೆಗೆ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು.

ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದೂ ತಿಳಿಸಿದರು.

ಶಾಸಕ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಮೊದಲಾದ ಪ್ರಮುಖರು ಭಾಗವಹಿಸಿದ್ದರು.

ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ ರಾಜ್ಯ ಸರ್ಕಾರ ತೊಲಗಿಸಿ, ಬೇಕೇ ಬೇಕು ನ್ಯಾಯ ಬೇಕು, ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ ಘೋಷಣೆಗಳನ್ನು ಕೂಗುತ್ತ ಸೈಕಲ್ ಜಾಥಾ ನಡೆಯಿತು.

ಸೈಕಲ್ ಜಾಥಾ ಪ್ರತಿಭಟನೆ ಸ್ವಲ್ಪ ದೂರ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು ಸೈಕಲ್ ಜಾಥಾದಲ್ಲಿ ಭಾಗವಹಿಸಿದ ಹಲವರನ್ನು ಬಂಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT