ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video: ಪೆಟ್ರೋಲ್‌, ಡೀಸೆಲ್‌ ತೆರಿಗೆ ಹೆಚ್ಚಳ- ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

ಪೆಟ್ರೋಲ್‌, ಡೀಸೆಲ್‌ ತೆರಿಗೆ ಹೆಚ್ಚಳ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
Published 17 ಜೂನ್ 2024, 13:00 IST
Last Updated 17 ಜೂನ್ 2024, 13:00 IST
ಅಕ್ಷರ ಗಾತ್ರ

ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಸಿದ ರಾಜ್ಯಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯು ರಾಜ್ಯದಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ‘ಪೆಟ್ರೋಲ್ ಬೆಲೆ ಲೀಟರ್ ಗೆ ₹3 , ಡೀಸೆಲ್ ಬೆಲೆ ₹3.50 ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ’ ಎಂದರು. ಜಿಲ್ಲಾ ಕೇಂದ್ರಗಳಲ್ಲಿಯೂ ಬಿಜೆಪಿಯ ಸಂಸದರು, ಶಾಸಕರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT