ಬೆಂಗಳೂರು: ಪೆಟ್ರೋಲ್ ಬೆಲೆ ಪ್ರಸ್ತಾಪದ ವಿರುದ್ಧ ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ. ಪೆಟ್ರೋಲ್ ದರ ಮತ್ತೆ ಏರಿಕೆ ಮಾಡಲು ಹೊರಟಿದ್ದೀರಲ್ಲ ಸ್ವಾಮಿ, ನಿಮ್ಮ ಸರ್ಕಾರದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪೆಟ್ರೋಲ್ ಬೆಲೆ ಮತ್ತಷ್ಟು ದುಬಾರಿ. ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ!

ಜೂನ್ 2024

ಪೆಟ್ರೋಲ್ - ₹3 ಏರಿಕೆ

ಡೀಸೆಲ್ - ₹3.5 ಏರಿಕೆ

ಏಪ್ರಿಲ್ 2025

ಡೀಸೆಲ್ - ₹2 ಏರಿಕೆ

ನವೆಂಬರ್ 2025

ಪೆಟ್ರೋಲ್ - ₹1 ಏರಿಕೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಸರ್ಕಾರ ಬಂದಾಗಿನಿಂದ ಕಳೆದ 2.5 ವರ್ಷಗಳಲ್ಲಿ ಈಗಾಗಲೇ ಡೀಸೆಲ್ ಬೆಲೆ ₹5.5 ಹಾಗೂ ಪೆಟ್ರೋಲ್ ಬೆಲೆ ₹3 ಹೆಚ್ಚಳ ಮಾಡಿ ಜನರ ಮೇಲೆ ಭಾರಿ ಹೊರೆ ಹೊರಿಸಿದ್ದೀರಿ.

ಈಗ ಮತ್ತೊಮ್ಮೆ ಪೆಟ್ರೋಲ್ ಬೆಲೆ ₹1 ಹೆಚ್ಚಳ ಮಾಡಲು ಹೊರಟಿದ್ದೀರಲ್ಲ, ನಿಮ್ಮ ಸರ್ಕಾದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು. ಈ ಜನವಿರೋಧಿ ಸರ್ಕಾರದಿಂದ ಕರ್ನಾಟಕದ ಜನತೆ ಬೇಸತ್ತು ಹೋಗಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕಿಡಿಕಾರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.