ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಜಿ ಆಯುಷ್ ಪ್ರವೇಶ: ಪರೀಕ್ಷಾ ಪ್ರಾಧಿಕಾರದಿಂದ ಕೌನ್ಸೆಲಿಂಗ್

Published 29 ಅಕ್ಟೋಬರ್ 2023, 16:29 IST
Last Updated 29 ಅಕ್ಟೋಬರ್ 2023, 16:29 IST
ಅಕ್ಷರ ಗಾತ್ರ

ಬೆಂಗಳೂರು: 2023 ನೇ ಸಾಲಿನ ಸ್ನಾತಕೋತ್ತರ ಆಯುರ್ವೇದ, ಯೋಗ ಮತ್ತು ನ್ಯಾಚುರೋಪಥಿ, ಯುನಾನಿ ಮತ್ತು ಹೋಮಿಯೋಪಥಿ ಕೋರ್ಸುಗಳಿಗೆ ಅಖಿಲ ಭಾರತ ಮಟ್ಟದಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಸರ್ಕಾರದ ಸೂಚನೆಯಂತೆ ಕೌನ್ಸೆಲಿಂಗ್ ನಡೆಯಲಿದೆ. 

ಪ್ರಾಧಿಕಾರವು ಸರ್ಕಾರಿ ಮಹಾವಿದ್ಯಾಲಯಗಳಲ್ಲಿ ಕೇಂದ್ರ ಸರ್ಕಾರದ ಕೋಟಾದ ಅಡಿ ಮೀಸಲಿರುವ ಶೇ 15 ರಷ್ಟು ಸೀಟುಗಳನ್ನು ಹೊರತುಪಡಿಸಿ ಮಿಕ್ಕ ಶೇ 85ರಷ್ಟು ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಶೇ 100 ರಷ್ಟು ಸೀಟುಗಳನ್ನು ಹಂಚಿಕೆ ಮಾಡಲಿದೆ. ಅರ್ಹ ಅಭ್ಯರ್ಥಿಗಳು ಪಿ.ಜಿ. ಆಯುಷ್ ಸೀಟುಗಳಿಗೆ ನೋಂದಾಯಿಸಿಕೊಳ್ಳಬಹುದು’ ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳು ಅ.30 ರಿಂದ ನ.2ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ನ.3 ರ ಒಳಗೆ ₹ 2,000 ನೋಂದಣಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1ರ ಅಡಿ ಬರುವ ಅಭ್ಯರ್ಥಿಗಳಿಗೆ ಈ ಶುಲ್ಕ ₹ 1 ಸಾವಿರ ಇರಲಿದೆ. ವೇಳಾಪಟ್ಟಿ, ದಾಖಲಾತಿಗಳ ಪರಿಶೀಲನೆ ಮಾಹಿತಿಗಳನ್ನು ಪ್ರಾಧಿಕಾರದ ಜಾಲತಾಣ http://kea.kar.nic.in ನಲ್ಲಿ ನೋಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT