ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಜಿ–ಸಿಇಟಿ ಪರೀಕ್ಷೆ ಮುಂದೂಡಿಕೆ

Published 25 ಜೂನ್ 2024, 15:37 IST
Last Updated 25 ಜೂನ್ 2024, 15:37 IST
ಅಕ್ಷರ ಗಾತ್ರ

ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಪಿಜಿ-ಸಿಇಟಿ) ಮುಂದೂಡಲಾಗಿದೆ.

ಈ ಮೊದಲು ಎಂ.ಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್‌ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಜುಲೈ 13 ಹಾಗೂ ಎಂ.ಸಿ.ಎ ಮತ್ತು ಎಂ.ಬಿ.ಎ. ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. 

ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳು ಜುಲೈ 5 ಮತ್ತು ಜುಲೈ 10ರಿಂದ ಪ್ರಾರಂಭವಾಗುತ್ತಿವೆ. ಹಾಗಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಹೇಳಿದ್ದಾರೆ.

ಅರ್ಜಿ ಸಲ್ಲಿಕೆ ಅವಧಿಯನ್ನೂ ವಿಸ್ತರಿಸಲಾಗಿದ್ದು, ಜುಲೈ 7ರ ಒಳಗೆ ಆನ್‌ಲೈನ್‌ ಮೂಲಕ ನೋಂದಣಿ ಮಾಡಬಹುದು. ಜುಲೈ 9ರ ಸಂಜೆ 6ರ ಒಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ. ಪರಿಷ್ಕೃತ ಮಾಹಿತಿಗಾಗಿ http://kea.kar.nic.in ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT