ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಿ.ಜಿ‌ ವೈದ್ಯಕೀಯ: ಅ. 9ರಿಂದ ಪ್ರವೇಶ ಆರಂಭ

Published 7 ಅಕ್ಟೋಬರ್ 2023, 16:04 IST
Last Updated 7 ಅಕ್ಟೋಬರ್ 2023, 16:04 IST
ಅಕ್ಷರ ಗಾತ್ರ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಅ. 9ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.

ಸೀಟು ದೊರೆತ ಅಭ್ಯರ್ಥಿಗಳು ಅ.9ರಂದು ಬೆಳಿಗ್ಗೆ 9ರಿಂದ ಅ.10ರ ರಾತ್ರಿ 8ರವರೆಗೆ ಚಲನ್‌ ಡೌನ್‌ಲೋಡ್‌ ಮಾಡಿಕೊಂಡು ಅ.11ರ ಒಳಗೆ ಶುಲ್ಕ‌ ಪಾವತಿಸಬಹುದು. 

ಕ್ಲಾಸ್- ‘ವೈ’ ಅಭ್ಯರ್ಥಿಗಳು ಶುಲ್ಕ ಪಾವತಿ‌ ನಂತರ ಮೂಲ ದಾಖಲೆಗಳನ್ನು ಕೆಇಎ ಕಚೇರಿಗೆ ಸಲ್ಲಿಸಬೇಕು. ಶುಲ್ಕ ಪಾವತಿ ಮತ್ತು ಮೂಲ ದಾಖಲೆಗಳನ್ನು ಸಲ್ಲಿಸಿದ ನಂತರ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಾಲೇಜಿಗೆ ವರದಿ‌ ಮಾಡಿಕೊಳ್ಳಲು‌ ಅ.12ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT