ಮೈಸೂರು: ‘ರಾಜ್ಯದಲ್ಲಿ ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಆದರೆ ಅವರದ್ದೇ ಶಾಸಕರು–ಸಚಿವರ ಮೇಲೆ ಗುಪ್ತಚಾರಿಕೆ ಮಾಡುತ್ತಿರುವುದು ಇದೇ ಮೊದಲು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆಯರಂತೆ ನಡೆದುಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಕದ್ದಾಲಿಕೆ ಆಗಲೂ ಇತ್ತು, ಈಗಲೂ ಇದೆ. ಆದರೆ ಕೆಲವೊಮ್ಮೆ ವಿಷಯಗಳು ಹೊರಗೆ ಬಂದು ಕೆಲವರ ತಲೆ ಉರುಳುತ್ತವೆ. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಜಾಸ್ತಿಯಾಗಿದೆ ಎಂದು ಅವರನ್ನೇ ಕೇಳಬೇಕು’ ಎಂದರು.

‘ಮುಖ್ಯಮಂತ್ರಿಯದ್ದು ಒಂದು ಗುಂಪು, ಮುಖ್ಯಮಂತ್ರಿ ಆಗಬೇಕು ಎಂದುಕೊಂಡವರದ್ದು ಒಂದು ಗುಂಪು ಪರಸ್ಪರ ಗೂಢಚಾರಿಕೆ ನಡೆಸುತ್ತಿರುವುದು ದುರಂತ’ ಎಂದರು.

‘ಗಲ್ಫ್ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರೂ ಸೇರಿದಂತೆ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಕ್ರಮ ವಹಿಸುತ್ತಿದೆ. ವಿಮಾನಗಳ ಹಾರಾಟ ಸ್ಥಗಿತಗೊಂಡ ಸಮಸ್ಯೆ ಆಗಿದೆ. ದುಬೈನಲ್ಲಿರುವ ಕನ್ನಡಿಗರು ಪ್ರವಾಸಿ ಕನ್ನಡಿಗರ ಸಹಾಯಕ್ಕೆ ಬಂದಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.