ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆ.29ಕ್ಕೆ ದೈಹಿಕ ಶಿಕ್ಷಣ ಶಿಕ್ಷಕರ ಸತ್ಯಾಗ್ರಹ

Published : 26 ಆಗಸ್ಟ್ 2024, 16:06 IST
Last Updated : 26 ಆಗಸ್ಟ್ 2024, 16:06 IST
ಫಾಲೋ ಮಾಡಿ
Comments

ಬೆಂಗಳೂರು: ಸಹ ಶಿಕ್ಷಕರು ಎಂದು ಪರಿಗಣಿಸಬೇಕು ಹಾಗೂ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿ ದೈಹಿಕ ಶಿಕ್ಷಣ ಶಿಕ್ಷಕರು ಆ.29ರಂದು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಸಮಾನ ವೇತನ, ಸಮಾನ ವಿದ್ಯಾರ್ಹತೆ ಇದ್ದರೂ ಶಾಲಾ ಶಿಕ್ಷಣ ಇಲಾಖೆಯ ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯ, ಬಡ್ತಿಗಳು ದೈಹಿಕ ಶಿಕ್ಷಕರಿಗೆ ಸಿಗುತ್ತಿಲ್ಲ. ಇಲಾಖೆಯ ಆದೇಶ 17 ವರ್ಷಗಳಿಂದ ಅನುಷ್ಠಾನವಾಗಿಲ್ಲ. ತಾರತಮ್ಯ ನಿವಾರಣೆಯಾಗಿಲ್ಲ. ಇಂತಹ ಹಲವು ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲು ಸ್ವಾತಂತ್ರ್ಯ ಉದ್ಯಾನದಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್‌. ಚೌಡಪ್ಪ ಹೇಳಿದ್ದಾರೆ.

ಪ್ರತ್ಯೇಕ ದೈಹಿಕ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸಬೇಕು. ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಕರನ್ನು ನೇಮಿಸುವ ನಿಯಮ ಬದಲಿಸಬೇಕು. ಪದವಿ‍ಪೂರ್ವ ಕಾಲೇಜುಗಳಲ್ಲೂ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆ ಸೃಜಿಸಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಒತ್ತಾಯಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT