ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತೊಗರಿಬೇಳೆ ಕೃಷಿ ಪ್ರದೇಶ 2 ಲಕ್ಷ ಹೆಕ್ಟೇರ್ ಹೆಚ್ಚಳ: ಸಚಿವ ಎನ್‌.ಚಲುವರಾಯಸ್ವಾಮಿ

Published 21 ಜೂನ್ 2024, 15:37 IST
Last Updated 21 ಜೂನ್ 2024, 15:37 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ಸಿಂಗ್ ಚೌಹಾಣ್‌ ಅವರು ವಿವಿಧ ರಾಜ್ಯಗಳ ಕೃಷಿ ಸಚಿವರ ಜತೆ ಮುಂಗಾರು ಮತ್ತು ಕೃಷಿಗೆ ಸಂಬಂಧಿಸಿದಂತೆ ಶುಕ್ರವಾರ ನಡೆಸಿದ ವಿಡಿಯೊ ಸಂವಾದದಲ್ಲಿ ರಾಜ್ಯ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಮಾತನಾಡಿ, ರಾಜ್ಯದ ಕೃಷಿ ಯೋಜನೆಗಳಿಗೆ ಬೆಂಬಲ ನೀಡುವಂತೆ ಕೇಂದ್ರವನ್ನು ಕೋರಿದರು.

ರಾಜ್ಯದ ಮಳೆ, ಬೆಳೆ ಮತ್ತು ರೈತರ ಸಮಸ್ಯೆಗಳ ಬಗ್ಗೆ ವಿವರ ನೀಡಿದರು. 31.6 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 19.83 ಲಕ್ಷ ಟನ್‌ ದ್ವಿದಳ ಧಾನ್ಯ ಬೆಳೆಯಲಾಗುತ್ತಿದೆ. ಅದರಲ್ಲೂ ತೊಗರಿಬೇಳೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ 2 ನೇ ಸ್ಥಾನದಲ್ಲಿದ್ದು, ಶೇ 31ರಷ್ಟು ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

2024– 25ನೇ ಸಾಲಿನಲ್ಲಿ ತೊಗರಿಬೇಳೆ ಉತ್ಪಾದನೆ ಪ್ರದೇಶವನ್ನು 2 ಲಕ್ಷ ಹೆಕ್ಟೇರ್‌ನಷ್ಟು ಹೆಚ್ಚಳ ಮಾಡಲು ಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಉತ್ಪಾದನೆ ಮತ್ತು ಉತ್ಪಾದಕತೆ ಎರಡನ್ನೂ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು, ಇದರಿಂದ ಬೇಳೆ ಕಾಳುಗಳ ಆಮದು ಅವಲಂಬನೆ ತಪ್ಪಿಸಲು ಸಹಾಯಕವಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದರು.

ರಾಜ್ಯದ ₹64.2 ಕೋಟಿ ಮೊತ್ತದ ತೊಗರಿಬೇಳೆ ಅಭಿವೃದ್ಧಿಯ ಹೆಚ್ಚುವರಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಕೃಷಿ ಸಚಿವರಿಗೆ ವಿಶೇಷ ಧನ್ಯವಾದ ಸಮರ್ಪಿಸಿದ ಅವರು, ಶೀಘ್ರದಲ್ಲೇ ವೈಯಕ್ತಿಕವಾಗಿ ಭೇಟಿ ಮಾಡುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT