ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ–ಕಲಬುರಗಿ ಪೀಠಗಳಲ್ಲೂ ಪಿಐಎಲ್‌ಗೆ ಅವಕಾಶ

Published 2 ಸೆಪ್ಟೆಂಬರ್ 2024, 16:39 IST
Last Updated 2 ಸೆಪ್ಟೆಂಬರ್ 2024, 16:39 IST
ಅಕ್ಷರ ಗಾತ್ರ

ಬೆಂಗಳೂರು: ಇನ್ನು ಮುಂದೆ ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳಲ್ಲೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್‌ ಕೆ.ಎಸ್.ಭರತ್‌ ಕುಮಾರ್ ಆದೇಶ ಹೊರಡಿಸಿದ್ದಾರೆ. ಎರಡೂ ಪೀಠಗಳಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು ಬೆಂಗಳೂರಿನ ವಿಭಾಗೀಯ ನ್ಯಾಯಪೀಠವೇ ವಿಚಾರಣೆ ನಡೆಸಿ ಆದೇಶಗಳನ್ನು ನೀಡಲಿದೆ.

2024ರ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ಈ ಎರಡೂ ಪೀಠಗಳ ವ್ಯಾಪ್ತಿಯ ಜಿಲ್ಲೆಗಳಲ್ಲಿನ ವಿಚಾರಗಳಲ್ಲಿ ಅಯಾ ಪೀಠಗಳಲ್ಲಿ ಪಿಐಎಲ್‌ ದಾಖಲಿಸಬಹುದಾಗಿದೆ. ಆದರೆ, ಈ ಪಿಐಎಲ್‌ಗಳನ್ನು ಬೆಂಗಳೂರು ಪ್ರಧಾನ ಪೀಠದಲ್ಲಿರುವ ವಿಭಾಗೀಯ ನ್ಯಾಯಪೀಠವು ವಿಡಿಯೊ ಕಾನ್ಫರೆನ್ಸ್‌ನಲ್ಲಿ ವಿಚಾರಣೆ ನಡೆಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT