ಹೊಸಪೇಟೆ (ವಿಜಯನಗರ): ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರದಿಂದ (ಬಿಟಿಪಿಎಸ್) ಹಂಪಿ ಸ್ಮಾರಕಗಳ ಪರಿಸರದಲ್ಲಿ ಕೈಗೆತ್ತಿಕೊಂಡಿರುವ ನೀರಿನ ಪೈಪ್‌ಲೈನ್ ಕಾಮಗಾರಿಯು ಷರತ್ತು ಉಲ್ಲಂಘಿಸಿರುವುದು ತನಿಖೆಯಿಂದ ಸಾಬೀತಾಗಿದೆ.

‘ಬಿಟಿಪಿಎಸ್ ಕಾಮಗಾರಿಗೆ ಅಪಸ್ವರ’ ಶೀರ್ಷಿಕೆ ಅಡಿ 2020ರ ಅ. 28ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.ಅದೇ ದಿನ ಕಾಮಗಾರಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು.

ನಂತರ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರವು ತನಿಖೆಗೆ ಪುರಾತತ್ವ ತಜ್ಞರ ಸಮಿತಿ ರಚಿಸಿತ್ತು. ಸಮಿತಿಯು ಸ್ಥಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿ, ಬಿಟಿಪಿಎಸ್ ನಿಯಮ ಉಲ್ಲಂಘಿಸಿ ಕಾಮಗಾರಿ ಕೈಗೆತ್ತಿಕೊಂಡಿದೆ ಎಂದು ವರದಿ ನೀಡಿದೆ. ಅದನ್ನು ಆಧರಿಸಿ ಪ್ರಾಧಿಕಾರದ ಆಯುಕ್ತರು, ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಸ್ಥಗಿತಗೊಳಿಸಲು ಸೂಚಿಸಿದ್ದಾರೆ.

ಈ ಬಗ್ಗೆ ಬಿಟಿಪಿಎಸ್ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಕುಮಾರ ಅವರಿಗೆ ಪತ್ರ ಬರೆದು, ‘ಪುರಾತತ್ವ ಇಲಾಖೆಯ ಸ್ಮಾರಕವಾದ ಶಿವ ದೇವಾಲಯದಿಂದ 100 ಮೀಟರ್ ಒಳಗೆ ಕಾಮಗಾರಿ ಕೈಗೆತ್ತಿಕೊಂಡಿದ್ದೀರಿ. ತಾಲ್ಲೂಕಿನ ಕಮಲಾಪುರ–ನಲ್ಲಾಪುರ ರಸ್ತೆಯಲ್ಲಿನ ಕೋಟೆ ಗೋಡೆಗೂ ಹಾನಿಯಾಗಿದೆ’ ಎಂದು ತಿಳಿಸಿದ್ದಾರೆ.

‘ಪೆನುಗೊಂಡ ಮಹಾದ್ವಾರದ ಬಳಿಯ ಕೋಟೆ ಗೋಡೆಯ 100 ಮೀಟರ್‌ನೊಳಗೆ ಕಾಮಗಾರಿ ನಡೆಯುತ್ತಿದೆ. ಸೀತಾರಾಮ ತಾಂಡಾ ಕಡೆಗೆ ಪೈಪ್‌ಲೈನ್ ಅಳವಡಿಸಲು ಕೋಟೆ ಗೋಡೆ ದಾಟಿಯೇ ಹೋಗಬೇಕಾಗುತ್ತದೆ.ಷರತ್ತಿಗೆ ಒಳಪಟ್ಟು ಕಾಮಗಾರಿ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಾಮಗಾರಿಗೆ ಕೊಟ್ಟಿರುವ ಅನುಮತಿ ರದ್ದುಗೊಳಿಸಲಾಗುವುದು’ ಎಂದು ಎಚ್ಚರಿಸಿದ್ದಾರೆ. ನರೇಂದ್ರ ಕುಮಾರ ಅವರನ್ನು ಸಂಪರ್ಕಿಸಿದಾಗ ಮಾಹಿತಿಗೆ ಲಭ್ಯರಾಗಲಿಲ್ಲ.

ಕರ್ನಾಟಕ ವಿದ್ಯುತ್ ನಿಗಮವೂ (ಕೆಪಿಸಿಎಲ್) ನಾರಾಯಣಪುರ ಜಲಾಶಯದಿಂದ ಬಿಟಿಪಿಎಸ್ ವರೆಗೆ ನೀರಿನ ಪೈಪ್‌ಲೈನ್ ಅಳವಡಿಸುತ್ತಿದೆ. ತಾಲ್ಲೂಕಿನ ಕಮಲಾಪುರ, ನಲ್ಲಾಪುರ, ಚಿನ್ನಾಪುರ ಮೂಲಕಪೈಪ್‌ಲೈನ್ ಅಳವಡಿಸಲಾಗುತ್ತಿದೆ. ಈ ಮಾರ್ಗದಲ್ಲಿ ಸ್ಮಾರಕ, ಕೋಟೆಗಳಿವೆ. ಈಗಾಗಲೇಕಮಲಾಪುರ ಬಳಿ ನೆಲ ಅಗೆದಿರುವುದರಿಂದ ಕೋಟೆ ಗೋಡೆಗೆ ಹಾನಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.