ಪಿರಿಯಾಪಟ್ಟಣ: ‘ಮಹಿಳೆಯರನ್ನು ಅಬಲೆ ಎಂದು ನೋಡುವ ಕಾಲ ಮುಗಿದಿದೆ, ನಿರ್ಧಾರ ತೆಗೆದುಕೊಳ್ಳುವ ಶಕ್ತಿಯಾಗಿ ಗುರುತಿಸುವ ಕಾಲ ಬಂದಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಪಟ್ಟಣದ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶನಿವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಹಿಂದೆ ಮಹಿಳೆಯರಿಗೆ ಬಹಳ ಕಷ್ಟವಿತ್ತು, ತಲೆ ಬಗ್ಗಿಸಿ ಗಂಡಸರನ್ನು ಮಾತನಾಡಿಸಬೇಕಿತ್ತು, ತಲೆ ಮೇಲೆ ಸೆರಗು ಮುಚ್ಚಿಕೊಳ್ಳಬೇಕಿತ್ತು. ಮೌನಕ್ಕೆ ಶರಣಾಗಬೇಕಿತ್ತು, ಸ್ವಾಭಿಮಾನ ಹತ್ತಿಕ್ಕಿಕೊಳ್ಳಬೇಕಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಮಹಿಳೆಯರು ಕಟ್ಟುಪಾಡುಗಳನ್ನು ಮೆಟ್ಟಿ ನಿಂತು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ’ ಎಂದರು.

‘ಗೃಹಲಕ್ಷ್ಮಿ ಯೋಜನೆಯನ್ನು ಹಕ್ಕಿನಿಂದ ತೆಗೆದುಕೊಂಡು, ಶಕ್ತಿ ಯೋಜನೆಯಲ್ಲಿ ಬಹಳ ಸ್ವಾಭಿಮಾನದಿಂದ ಪ್ರಯಾಣ ಮಾಡುತ್ತಿದ್ದಾಳೆ. ಒಬ್ಬ ಮಹಿಳಾ ಮಂತ್ರಿಯಾಗಿ ಇದಕ್ಕಿಂತ ಸಂತೋಷ ಇನ್ನೊಂದಿಲ್ಲ. 300 ವರ್ಷ ನಮ್ಮನ್ನಾಳಿದ ಬ್ರಿಟಿಷರ ವಿರುದ್ಧ ಟೊಂಕಕಟ್ಟಿ ಹೋರಾಡಿದ ಮಹಿಳೆ ನಮ್ಮ ಕಿತ್ತೂರು ರಾಣಿ ಚನ್ನಮ್ಮ. ದೊಡ್ಡ ದೊಡ್ಡ ಮಹಾರಾಜರು ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ, ಸ್ವಾಭಿಮಾನಿ ಮಹಿಳೆ ಕಿತ್ತೂರು ಚನ್ನಮ್ಮ. ಇದರರ್ಥ ಅನ್ಯಾಯದ ವಿರುದ್ಧ ಹೋರಾಡುವುದು ಮಾನವನ ಕರ್ತವ್ಯ’ ಎಂದರು.

‘ನಮ್ಮ ಮಕ್ಕಳೇ ಮುಂದಿನ ಭವಿಷ್ಯ, ಸುಮ್ಮನಿರು ಎನ್ನುವುದನ್ನು ಬಿಟ್ಟು ಮಾತನಾಡು ಎಂದು ನಾವು ಮಗಳಿಗೆ ಹೇಳಿಕೊಡಬೇಕು. ಕೇವಲ ವಿದ್ಯಾಭ್ಯಾಸ ಕಲಿಸದೇ ಸ್ವಂತ ಕಾಲಮೇಲೆ ನಿಲ್ಲುವಂತೆ ಮಕ್ಕಳನ್ನು ರೂಪಿಸಿ, ಸ್ವಾಭಿಮಾನದ ಪಾಠವನ್ನು ಕಲಿಸಬೇಕು, ಬೇರೆಯವರಿಗೆ ಗೌರವ ಕೊಡುವುದರ ಜೊತೆಗೆ ನಿನಗೆ ನೀನು ಗೌರವ ಕೊಡುವುದನ್ನು ಕಲಿ ಎಂಬುದನ್ನು ಕಲಿಸಿ’ ಎಂದು ತಿಳಿಸಿದರು.

ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಮಾತನಾಡಿ, ‘ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಅನುದಾನವನ್ನು ಈಗಾಗಲೇ ಮೀಸಲಿಟ್ಟಿದ್ದು, ಯಾವುದೇ ಸಂದರ್ಭದಲ್ಲಿಯೂ ತೊಂದರೆಯಾಗದಂತೆ ಆಡಳಿತ ನಡೆಸುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ದುಡಿದ ಸರ್ಕಾರವನ್ನು ಯಾರು ಕೂಡ ಮರೆಯಬಾರದು’ ಎಂದರು.

ಮೈಮುಲ್ ನಿರ್ದೇಶಕ ಪ್ರಕಾಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಬಸವರಾಜ್, ತಾಲ್ಲೂಕು ಸಹಾಯಕ ನಿರ್ದೇಶಕಿ ವೀಣಾ, ಮೇಲ್ವಿಚಾರಕರಾದ ಸವಿತಾ, ಮಂಜುನಾಥ್, ಉಮೇಶ್, ರೇಖಾ, ಧನ್ಯರತಿ, ಮುಖಂಡರರಾದ ಕೆ.ಆರ್.ನಿರೂಪ, ಮಂಜುಳಾ ರಾಜ್, ಬಸವರಾಜ್, ಡಿ.ಟಿ.ಸ್ವಾಮಿ, ಆರ್.ಎಸ್.ಮಹದೇವ್, ಪುಟ್ಟರಾಜು, ಅನಿಲ್ ಕುಮಾರ್, ರೆಹಮತ್ ಜಾನ್ ಬಾಬು, ಎಚ್.ಜಿ.ಪರಮೇಶ್, ಮಹದೇವ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-38-1333305278

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.