ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಮೃತಪಟ್ಟ ರೈತರ ಸಾಲಮನ್ನಾ: ಸಚಿವ ಎಸ್.ಟಿ.ಸೋಮಶೇಖರ್

Last Updated 10 ಜುಲೈ 2021, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ‘ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಪಡೆದ ರೈತರು ಕೋವಿಡ್‌ನಿಂದ ಮೃತಪಟ್ಟಿದ್ದರೆ ಅಂಥವರ ಸಾಲ ಮನ್ನಾ ಮಾಡಲು ಚಿಂತನೆ ನಡೆದಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಕಲಬುರ್ಗಿ–ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಶನಿವಾರ ಇಲ್ಲಿ ಏರ್ಪಡಿಸಿದ್ದ ರೈತರಿಗೆ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ 341 ರೈತರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅವರ ₹ 19 ಕೋಟಿ ಸಾಲವನ್ನು ಈ ಬ್ಯಾಂಕುಗಳ ಲಾಭಾಂಶದ ಹಣದಲ್ಲಿ ಮನ್ನಾ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಅವರು ಶೀಘ್ರ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದರು.

ಆದಾಯ ದ್ವಿಗುಣ ಸಂಕಲ್ಪ: ‘ಪ್ರಧಾನಿ ಮೋದಿ ಅವರು ರೈತರ ಆದಾಯ ದ್ವಿಗುಣಗೊಳಿಸುವ ಸಂಕಲ್ಪ ‌ಮಾಡಿದ್ದಾರೆ. ಪೂರಕವಾಗಿ ದೇಶ
ದಾದ್ಯಂತ ಕಡಿಮೆ ಸಮಯದಲ್ಲಿ ಸಂಚರಿಸುವ ‌ಕಿಸಾನ್ ಎಕ್ಸ್‌ಪ್ರೆಸ್ ರೈಲನ್ನು ‌ಆರಂಭಿಸಿದ್ದಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

‘ರಾಜ್ಯ ಸರ್ಕಾರವೂ ಹೂ ಬೆಳೆಗಾರರ ನೆರವಿಗೆ ಬಂದಿದ್ದು, ಹೂ ಬೆಳೆದು ನಷ್ಟ ‌ಮಾಡಿಕೊಂಡಿರುವವರಿಗೆ ತಲಾ ₹ 10 ಸಾವಿರದಂತೆ 69 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT