ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ವಿಜ್ಞಾನ ದಿನದಂದು ಶಾಲೆಗಳಲ್ಲಿ ಮಾನವೀಯ ಮೌಲ್ಯದ ಪ್ರತಿಜ್ಞಾ ವಿಧಿ

Published 26 ಫೆಬ್ರುವರಿ 2024, 16:28 IST
Last Updated 26 ಫೆಬ್ರುವರಿ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ವಿಜ್ಞಾನ ದಿನವಾದ ಫೆ.28ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಕುರಿತು ವಿದ್ಯಾರ್ಥಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

ವಿಜ್ಞಾನ ತಂತ್ರಜ್ಞಾನ ಸಚಿವ ಎಸ್‌.ಎನ್‌.ಬೋಸರಾಜು, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಟಿಪ್ಪಣಿಯಂತೆ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ. 

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಸಂವಿಧಾನದ ಆಶಯಗಳನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಂಡರೆ ಸಾಮಾಜಿಕ ಸಾಮರಸ್ಯ ಸಹಜವಾಗಿ ಅರಳುತ್ತದೆ ಎಂಬುದಕ್ಕೆ ಒತ್ತು ನೀಡಿ ಶಾಲಾ–ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದಿಗೆ ಆದೇಶಿಸಿತ್ತು. 

ಎಲ್ಲ ಶಿಕ್ಷಣ ಸಂಸ್ಥೆಗಳನ್ನೂ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಹಾಗೂ ಸಹ ಬಾಳ್ವೆಯ ಕೇಂದ್ರಗಳಾಗಿ ರೂಪಿಸಲು ‘ನಾವು ಮನುಜರು’ ಎಂಬ ಕಾರ್ಯಕ್ರಮವನ್ನು ಬಜೆಟ್‌ನಲ್ಲಿ ಘೋಷಿಸಿದೆ. ಈಗ ವಿಜ್ಞಾನದ ದಿನ ಏಕಲಾಲಕ್ಕೆ ಎಲ್ಲ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾವಿಧಿ ಸ್ವೀಕರಿಸಲು ಸೂಚಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT