ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಕರ್ನಾಟಕದಲ್ಲಿ ಫಲಾನುಭವಿಗಳ ಸಂಖ್ಯೆ ಕಳೆದ ಐದು ವರ್ಷಗಳಲ್ಲಿ 10 ಲಕ್ಷದಷ್ಟು ಕುಸಿತ ಕಂಡಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ರಣದೀಪ್ ಸಿಂಗ್ ಸುರ್ಜೆವಾಲಾ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ಭಗೀರಥ್ ಚೌಧರಿ ಈ ಬಗ್ಗೆ ಉತ್ತರ ನೀಡಿದ್ದಾರೆ.

ಆಯಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಪಿಎಂ–ಕಿಸಾನ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿದ ಅರ್ಹ ಫಲಾನುಭವಿಗಳ ಪಟ್ಟಿ ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಜಮೀನಿನಲ್ಲಿ ಬಿತ್ತನೆ, ಇ–ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡದಿರುವುದು, ಮೃತ ಫಲಾನುಭವಿಗಳು ಮತ್ತಿತರ ಕಾರಣಗಳಿಂದಾಗಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಯೋಜನೆಯಡಿ ಫಲಾನುಭವಿಯ ಖಾತೆಗೆ ವರ್ಷಕ್ಕೆ ₹6 ಸಾವಿರ ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ಹೆಚ್ಚಳ ಮಾಡುವ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.