ಬೆಂಗಳೂರು: ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ( ಮೇ 9) ಬೆಂಗಳೂರಿಗೆ ಬರಲಿದ್ದಾರೆ.

ಕನಕಪುರ ರಸ್ತೆಯಲ್ಲಿ ಇರುವ ಆರ್ಟ್ ಆಫ್ ಲಿವಿಂಗ್ನ 45ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಲು ಮೋದಿ ಅವರು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 9ರ ಹೊತ್ತಿಗೆ ಬಂದಿಳಿಯಲಿದ್ದಾರೆ. ಈ ವೇಳೆ, ರಾಜ್ಯ ಬಿಜೆಪಿ ಘಟಕವು ವಿಮಾನ ನಿಲ್ದಾಣದ ಆವರಣದಲ್ಲಿಯೇ ಮೋದಿ ಅವರಿಗೆ ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಮೋದಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

‘ಈಚೆಗೆ ನಡೆದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಗೆಲುವು ಸಾಧಿಸಿದೆ. ಈ ಗೆಲುವಿನಲ್ಲಿ ಪ್ರಧಾನಿ ಮೋದಿ ಅವರ ಪಾತ್ರ ದೊಡ್ಡದಿದೆ. ಹೀಗಾಗಿ ಅವರನ್ನು ಸನ್ಮಾನಿಸಲಾಗುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ತಿಳಿಸಿದ್ದಾರೆ.

ನಂತರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಅಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಧ್ಯಾನ ಮಂದಿರವನ್ನು ಉದ್ಘಾಟಿಸಿ, ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿಗೆ ಹೊರಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.