ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Published 8 ಡಿಸೆಂಬರ್ 2023, 18:42 IST
Last Updated 8 ಡಿಸೆಂಬರ್ 2023, 18:42 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಅವರು ನಿನ್ನೆ ( ಶುಕ್ರವಾರ) ಇಹಲೋಕ ತ್ಯಜಿಸಿದ್ದಾರೆ.

ಲೀಲಾವತಿ ಅವರ ನಿಧನದ ಕುರಿತು ಎಕ್ಸ್ ನಲ್ಲಿ ಪ್ರಧಾನಿ ಮೋದಿ ಅವರು 'ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.' ಎಂದು ಬರೆದುಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಲೀಲಾವತಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT