ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ವಿಶ್ವ ವಿದ್ಯಾಲಯಗಳಿಗೆ ₹3,600 ಕೋಟಿ ನೀಡಿದ ಪ್ರಧಾನಿ: ಪ್ರಲ್ಹಾದ ಜೋಶಿ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ನೇರ ಪ್ರಸಾರದಲ್ಲಿ ಪಾಲ್ಗೊಂಡ ಸಚಿವ ಪ್ರಲ್ಹಾದ ಜೋಶಿ
Published 20 ಫೆಬ್ರುವರಿ 2024, 9:38 IST
Last Updated 20 ಫೆಬ್ರುವರಿ 2024, 9:38 IST
ಅಕ್ಷರ ಗಾತ್ರ

ಬೆಳಗಾವಿ: ‘ಕರ್ನಾಟಕ, ಜಮ್ಮು– ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ ₹3,600 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣವನ್ನು ವಿಶ್ವಮಟ್ಟಕ್ಕೆ ಅಭಿವೃದ್ಧಿಪಡಿಸುವುದು ಇದರ ಉದ್ದೇಶ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪ್ರಧಾನಮಂತ್ರಿ ‘ಉಷಾ’ ಯೋಜನೆ ಅಡಿ 78 ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅನುದಾನ ನೀಡಿದ್ದಾರೆ. ಸೋಮವಾರವೇ ಎಲ್ಲ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದರು.

‘ಉಷಾ’ ಯೋಜನೆಯಡಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ₹100 ಕೋಟಿ, ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ಹಾಗೂ ಧಾರವಾಡ ವಿಶ್ವವಿದ್ಯಾಲಯಕ್ಕೆ ₹20 ಕೋಟಿ ದೊರೆಯಲಿದೆ’ ಎಂದರು.

‘ಸಾಕ್ಷರತೆಯಿಂದ ಮಾತ್ರ ದೇಶದ ನೈಜ ವಿಕಾಸ ಸಾಧ್ಯವೆಂದು ನಂಬಿರುವ ಪ್ರಧಾನಿ ಮೋದಿ, ದೇಶದ ವಿಶ್ವವಿದ್ಯಾಲಯಗಳಿಗೆ ಹೊಸ ಜೀವ ತುಂಬಲು ಇಂಥ ಮಹತ್ತರ ಯೋಜನೆಗೆ ಚಾಲನೆ ನೀಡಿದ್ದಾರೆ’ ಎಂದು ಜೋಶಿ ಹೇಳಿದರು.

‘ಭಾರತದ ಯುವ ಜನತೆಗೆ ಶಿಕ್ಷಣ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸಿ ಭಾರತವನ್ನು ವಿಶ್ವಗುರು ಮಾಡುವ ಧ್ಯೇಯ ಪ್ರಧಾನಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಿಂದಲೇ ವಿದ್ಯಾರ್ಥಿಗಳ ಅಮೂಲ್ಯ ಜೀವನ ರೂಪಿಸಲು ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ’ ಎಂದರು.

ಅಭಿವೃದ್ಧಿಗೆ ಐತಿಹಾಸಿಕ ಕ್ರಮ:

‘ಜಮ್ಮು– ಕಾಶ್ಮೀರ ಎಂದರೆ ಹಿಂಸಾಚಾರ, ಭಯೋತ್ಪಾದನೆಯೇ ಎಲ್ಲರ ಮನದಲ್ಲಿ ಹಾದು ಹೋಗುತ್ತಿತ್ತು. ಈಗ ಅದು ಸಂಪೂರ್ಣ ಬದಲಾಗಿದೆ. ಅಭಿವೃದ್ಧಿ ಪರ್ವ ಆರಂಭವಾಗಿದೆ. ವಿಶ್ವವಿದ್ಯಾಲಯಗಳ ಅನುದಾನ ಬಿಡುಗಡೆ ಸೇರಿದಂತೆ ಜಮ್ಮುವಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ನಾನು ಮತ್ತು ಸಂಸದೆ ಮಂಗಳಾ ಅಂಗಡಿ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆದ ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT