ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ 'ಶ್ರೀಗುರು ಭೈರವೈಕ್ಯ ಮಂದಿರ'ವನ್ನು ಲೋಕಾರ್ಪಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಬೆಳಗ್ಗೆ ಇಲ್ಲಿಗೆ ಆಗಮಿಸಿದರು.

ಇಲ್ಲಿನ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಜರಿದ್ದರು.

ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.

ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಕ್ಷೇತ್ರಕ್ಕೆ ಬರಲಿದ್ದು, ಗುರು ಗೋರಖನಾಥರು ತಪಸ್ಸು ಮಾಡಿದ್ದ ಜ್ವಾಲಾಪೀಠ (ಉರಿಗದ್ದುಗೆ) ದರ್ಶನ ಮಾಡಿ, ಕ್ಷೇತ್ರಪಾಲಕ ಕಾಲಭೈರವನಿಗೆ ಮಂಗಳಾರತಿ ಸಲ್ಲಿಸುವರು. ಗುರು ಭೈರವೈಕ್ಯ ಮೂಲಮಂದಿರದಲ್ಲಿ ಪೂಜೆ ಸಲ್ಲಿಸಿ ದೇವಾಲಯ ಉದ್ಘಾಟಿಸುವರು. ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.