‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ @narendramodi ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ.
ಪ್ರಧಾನಿ @narendramodi ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.
ಪ್ರಧಾನಿ @narendramodi ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ…