ಬೆಂಗಳೂರು: ಹಿರಿಯ ಕವಿ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಡಾ. ಸಿದ್ದಲಿಂಗಯ್ಯ ಅವರ ಬರಹಗಳು, ಕವನಗಳು ಮತ್ತು ಅವರು ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆ ಅಪಾರವಾದದ್ದು, ಅವರ ನಿಧನ ಸುದ್ದಿ ಬೇಸರ ತರಿಸಿದೆ. ಅಭಿಮಾನಿಗಳು ಮತ್ತು ಕುಟುಂಬಸ್ಥರಿಗೆ ಅಗಲಿಕೆಯ ನೋವು ಭರಿಸುವ ಶಕ್ತಿ ದೊರೆಯಲಿ ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ.

ಕೊರೊನಾ ಸೋಂಕಿತರಾಗಿದ್ದ ಕವಿ ಸಿದ್ದಲಿಂಗಯ್ಯ ಅವರು (67) ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ಅವರಿಗೆ ಕಳೆದ ತಿಂಗಳು ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಮೇ 2 ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬೆಂಗಳೂರಿನ ರಂಗದೊರೈ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಮೇ 5ರಂದು ಹಳೆ ವಿಮಾಣ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಒದಗಿಸಲಾಗುತ್ತಿತ್ತು. ಒಂದು ತಿಂಗಳಿಗೂ ಅಧಿಕ ಕಾಲ ಆಸ್ಪತ್ರೆಯಲ್ಲಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆಯೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರ ಇದ್ದಾರೆ.

ಸಿದ್ದಲಿಂಗಯ್ಯ ಅವರು ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದು, ದಲಿತ ಕವಿ ಎಂದೇ ಜನಪ್ರಿಯರಾಗಿದ್ದರು.

ಇದನ್ನೂ ಓದಿ... ಹಿರಿಯ ಕವಿ ಸಿದ್ದಲಿಂಗಯ್ಯ ನಿಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.