ಬೆಂಗಳೂರು: ಶಿರೂರು ಗುಡ್ಡ ಕುಸಿತದ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಒಪ್ಪಿದೆ.
ಶಿರೂರು ಗುಡ್ಡ ಕುಸಿತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಕೋರಿ ಉತ್ತರ ಕನ್ನಡ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಭಾರಿ ಮಳೆಯಿಂದಾಗಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ವಿಶೇಷ ಅನುದಾನ ನೀಡಬೇಕು ಎಂದು ಕೋರಿ ನೀವು ಬರೆದ ಪತ್ರ ನನಗೆ ತಲುಪಿದೆ. ವಿಶೇಷ ಅನುದಾನ ರೂಪದಲ್ಲಿ ಪರಿಹಾರ ಬಿಡುಗಡೆಯಾಗಲಿದೆ’ ಎಂದು ಹೇಳಿದ್ದಾರೆ.