ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ವಿ.ವಿ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಇಂದು

Last Updated 19 ಅಕ್ಟೋಬರ್ 2020, 2:45 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಸಮಾರಂಭ ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಸೋಮವಾರ ಬೆಳಿಗ್ಗೆ 11.15ಕ್ಕೆ ಮೈಸೂರು ವಿವಿ ಘಟಿಕೋತ್ಸವ ಭಾಷಣ ಮಾಡಲಿದ್ದೇನೆ. ಕಲಿಕೆ ಮತ್ತು ಅನ್ವೇಷಣೆಯ ಪ್ರಧಾನ ಕೇಂದ್ರದ ವಿಶೇಷ ಸಂದರ್ಭದ ಭಾಗವಾಗಿರಲು ಕಾತರನಾಗಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

ಇದರೊಂದಿಗೆ, ಮೈಸೂರು ವಿವಿ ಘಟಿಕೋತ್ಸವ ಭಾಷಣ ಮಾಡಿದ ಎರಡನೇ ಪ್ರಧಾನಿಯಾಗಲಿದ್ದಾರೆ ಮೋದಿ. ಈ ಹಿಂದೆ ಮಾಜಿ ಪ್ರಧಾನಿ ದಿ. ಜವಹರಲಾಲ್ ನೆಹರು ಅವರು ಮೈಸೂರು ವಿವಿ ಘಟಿಕೋತ್ಸವ ಭಾಷಣ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯಲ್ಲಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಪ್ರಧಾನಿ ಭಾಷಣ ಬೆಳಿಗ್ಗೆ 11.15 ರಿಂದ 11.40ರ ವರೆಗೆ ಇರಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT