ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

64ನೇ ವಸಂತಕ್ಕೆ ಕಾಲಿಟ್ಟ HD ಕುಮಾರಸ್ವಾಮಿ: ಪ್ರಧಾನಿ ಮೋದಿ ಸೇರಿ ಗಣ್ಯರ ಶುಭಾಶಯ

Published 16 ಡಿಸೆಂಬರ್ 2023, 11:21 IST
Last Updated 16 ಡಿಸೆಂಬರ್ 2023, 11:21 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಇಂದು (ಶನಿವಾರ) 64ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.

‘ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಕರ್ನಾಟಕದ ಪ್ರಗತಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನಾವು ನಿಕಟವಾಗಿ ಚರ್ಚೆ ನಡೆಸಿದ್ದೇವೆ. ಜನರಿಗೆ ಮತ್ತಷ್ಟು ಸೇವೆ ಸಲ್ಲಿಸಲು ಕುಮಾರಸ್ವಾಮಿ ಅವರಿಗೆ ಆರೋಗ್ಯಕರ ಜೀವನ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ನನ್ನ ಪುತ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ ಸುದೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸುತ್ತೇನೆ. ಶುಭವಾಗಲಿ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

‘ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಹಾರೈಸುತ್ತೇನೆ’ ಎಂದು ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

‘ಮಾಜಿ ಮುಖ್ಯಮಂತ್ರಿ, ಆತ್ಮೀಯರೂ ಆದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಭಗವಂತ ಉತ್ತಮ ಆಯುಷ್ಯ, ಆರೋಗ್ಯ ಕರುಣಿಸುವ‌ ಮೂಲಕ, ಸಾರ್ವಜನಿಕ ಜೀವನದಲ್ಲಿ ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ ಎಂದು ಹಾರೈಸುತ್ತೇನೆ’ ಎಂದು ಆರ್‌.ಅಶೋಕ ಶುಭ ಕೋರಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡು ರಾಷ್ಟ್ರ ಹಿತಾಸಕ್ತಿಗಾಗಿ ಕೈಜೋಡಿಸಿರುವ ನಿಮಗೆ ದೇವರು ಉತ್ತಮ ಆಯುಷ್ಯ, ಆರೋಗ್ಯ ಕರುಣಿಸಿ ಸಾರ್ವಜನಿಕ ಜೀವನದಲ್ಲಿ ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿಯನ್ನು ಕರುಣಿಸಲೆಂದು ಹಾರೈಸುತ್ತೇನೆ’ ಎಂದು ಬಿ.ವೈ.ವಿಜಯೇಂದ್ರ ಶುಭ ಹಾರೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT