ಮೈಸೂರು: ದಲಿತ ಸಮುದಾಯಕ್ಕೆ ಸೇರಿದ ನಗರದ ಬಾಲಕಿಯೊಬ್ಬಳಿಗೆ ಕೆಲಸದ ಆಮಿಷವೊಡ್ಡಿ ಮಂಗಳೂರಿಗೆ ಕರೆದುಕೊಂಡು ಹೋದ ಮೂವರು ಪಾದ್ರಿಗಳು ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ಇಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ದಾಖಲಾಗಿದೆ.

‘ಮನೆ ನಿರ್ಮಿಸಲು ಹಣ ಕೊಡುತ್ತೇವೆ, ನರ್ಸಿಂಗ್ ಕೆಲಸ ಕೊಡಿಸುತ್ತೇವೆ ಎಂದು ಆಮಿಷ ಒಡ್ಡಿದ ಮಂಗಳೂರಿನ ಈ ಪಾದ್ರಿಗಳು 16 ವರ್ಷದ ಬಾಲಕಿಯನ್ನು ಕಳೆದ ವರ್ಷ ಫೆಬ್ರುವರಿಯಲ್ಲಿ ಕರೆದುಕೊಂಡು ಹೋಗಿದ್ದರು. ಆದರೆ, ಅಲ್ಲಿ ಬಾಲಕಿಯನ್ನು ಮನೆಗೆಲಸಕ್ಕೆ ಇರಿಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಹಾಗೂ ಜಾತಿನಿಂದನೆ ಮಾಡಿದ್ದಾರೆ’ ಎಂದು ಬಾಲಕಿ ತಾಯಿ ಹೈಕೋರ್ಟ್‌ಗೆ ದೂರು ಸಲ್ಲಿಸಿದ್ದರು.

ಈ ದೂರನ್ನು ಸ್ವೀಕರಿಸಿದ ಹೈಕೋರ್ಟ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನಗರ ಪೊಲೀಸರಿಗೆ ಸೂಚಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರಿಗೆ ಬಾಲಕಿ ತಾಯಿ ವಾಸವಿರುವ ಮನೆ ಇನ್ನೂ ಸಿಕ್ಕಿಲ್ಲ. ಒಂದು ತಂಡ ಮಂಗಳೂರಿಗೆ ತನಿಖೆಗಾಗಿ ತೆರಳಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.