ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೋಕ್ಸೊ ಪ್ರಕರಣ: ಶಿವಮೂರ್ತಿ ಶರಣರ ಅರ್ಜಿ ವಜಾ

Published : 13 ಸೆಪ್ಟೆಂಬರ್ 2024, 15:49 IST
Last Updated : 13 ಸೆಪ್ಟೆಂಬರ್ 2024, 15:49 IST
ಫಾಲೋ ಮಾಡಿ
Comments

ಬೆಂಗಳೂರು: ‘ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ಭಾಗವನ್ನು ತೆಗೆದುಹಾಕಲು ನಿರ್ದೇಶಿಸಬೇಕು’ ಎಂದು ಕೋರಿದ್ದ ಪ್ರಕರಣದ ಆರೋಪಿಯೂ ಆದ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಈ ಕುರಿತಂತೆ ಶಿವಮೂರ್ತಿ ಮುರುಘಾ ಶರಣರು ಬಿನ್‌ ಲೇಟ್‌ ಗುರುಮೂರ್ತಯ್ಯ (64) ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ (ಸಿಆರ್‌ಎಲ್‌ಪಿ 7330/2024) ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು. ತೀರ್ಪಿನ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಶರಣರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 376 (2) (ಎನ್‌), 376 (3), 504 ಮತ್ತು ಪೋಕ್ಸೊ ಕಾಯ್ದೆ–2012ರ ಕಲಂ 5 (ಎಲ್‌) ಮತ್ತು 6ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದ್ದು, ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT